ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಡಾ.ಅಬ್ದುಲ್ ಶಕೀಲ್ ಕರೆ

ಉಡುಪಿ, ಫೆ.4: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಕಾರ್ಯಕಾರಿ ಸಮಿತಿ ಮತ್ತು ಬ್ಲಾಕ್ ಅಧ್ಯಕ್ಷರುಗಳ ಸಭೆ ಇಂದು ಬ್ರಹ್ಮಗಿರಿಯಲ್ಲಿ ರುವ ಕಾಂಗ್ರೆಸ್ ಭವನದಲ್ಲಿ ಜರಗಿತು.
ಸಭೆಯಲ್ಲಿ ಭಾಗವಹಿಸಿದ ಕರ್ನಾಟಕ ಕಾಂಗ್ರೆಸ್ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಹಾಗೂ ಉಡುಪಿ-ಚಿಕ್ಕಮಗಳೂರು ಉಸ್ತುವಾರಿ ಡಾ. ಅಬ್ದುಲ್ ಶಕೀಲ್ ಮಾತನಾಡಿ, ಕಾರ್ಯಕರ್ತರು ಒಗ್ಗೂಡಿ ಸಂಘಟಿಸುವ ಮೂಲಕ ಜಿಲ್ಲೆಯಲ್ಲಿ ಇನ್ನಷ್ಟು ಪಕ್ಷದ ಬಲವರ್ಧನೆ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಜಿಲ್ಲಾಧ್ಯಕ್ಷ ಎಂ.ಪಿ.ಮೊದಿನಬ್ಬ, ಸಂಯೋಜಕ ಸೈಯದ್ ಯಾಸಿನ್, ಜಿಲ್ಲಾ ವಕ್ಫ್ ಸಲಹಾ ಮಂಡಳಿ ಅಧ್ಯಕ್ಷ ಕೆ.ಪಿ.ಇಬ್ರಾಹಿಂ, ಉಪಾಧ್ಯಕ್ಷ ಡೇರಿಕ್ ಡಿಸೋಜ, ಹಸನ್ ಮಣಿಪುರ, ಐಡ ಗಿಬ್ಬಾ ಡಿಸೋಜ, ಬ್ಲಾಕ್ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಅಬಿದ್ ಆಲಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.





