ಗಾಂಜಾ ಸಾಗಾಟ : ಇಬ್ಬರು ಆರೋಪಿಗಳ ಬಂಧನ
ಮಂಗಳೂರು, ಫೆ.4: ನಗರದ ಹಳೆ ಬಂದರು ಧಕ್ಕೆ ಗೇಟಿನ ಎದುರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪ ದಲ್ಲಿ ಪೊಲೀಸರು ಇಬ್ಬರನ್ನು ಗುರುವಾರ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಇರ್ಫಾನ್ ಮತ್ತು ರಾಜೇಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ 15 ಸಾವಿರ ರೂ. ಮೌಲ್ಯದ 550 ಗ್ರಾಂ ಗಾಂಜಾ ವಶಪಡಿಸಲಾಗಿದೆ. ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಮಂಗಳೂರು ಉತ್ತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story





