Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳಲ್ಲಿ...

ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳಲ್ಲಿ ಹೂಡಿಕೆಗೆ ಮುಂದಾಗಿ: ಉದ್ಯಮಿಗಳಿಗೆ ಸಚಿವ ಶೆಟ್ಟರ್ ಕರೆ

ವಾರ್ತಾಭಾರತಿವಾರ್ತಾಭಾರತಿ4 Feb 2021 11:13 PM IST
share
ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳಲ್ಲಿ ಹೂಡಿಕೆಗೆ ಮುಂದಾಗಿ: ಉದ್ಯಮಿಗಳಿಗೆ ಸಚಿವ ಶೆಟ್ಟರ್ ಕರೆ

ಬೆಂಗಳೂರು, ಫೆ.4: ಬೆಂಗಳೂರು ನಗರದಂತೆಯೆ ರಾಜ್ಯದ ಎರಡನೆ ಹಾಗೂ ಮೂರನೆ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದರು.

ಗುರುವಾರ ಯಲಹಂಕದಲ್ಲಿರುವ ವಾಯುನೆಲೆಯಲ್ಲಿ ಏರೋ ಇಂಡಿಯಾ 2021 ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಏರೋ ಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ರಾಜ್ಯದಲ್ಲಿ ಇರುವ ವಿಫುಲ ಅವಕಾಶಗಳನ್ನು ತಿಳಿಸುವ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ. ಇತ್ತೀಚಿನ ಹಲವಾರು ನೂತನ ನೀತಿಗಳು ಹಾಗೂ ಕಾಯ್ದೆಗಳು ರಾಜ್ಯವನ್ನು ದೇಶದಲ್ಲಿಯೆ ಬಂಡವಾಳ ಹೂಡಿಕೆಯ ಪ್ರಮುಖ ರಾಜ್ಯವನ್ನಾಗಿಸಿದೆ. ನೀತಿ ಆಯೋಗದ ಸೂಚ್ಯಾಂಕದಲ್ಲಿ ಸತತ ಎರಡು ವರ್ಷಗಳ ಕಾಲ ಮೊದಲ ಸ್ಥಾನವನ್ನು ಪಡೆದುಕೊಂಡಿದೆ ಎಂದು ಅವರು ಹೇಳಿದರು.

ಸಂಶೋಧನೆ ಹಾಗೂ ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದ್ದು, ಸ್ಟಾರ್ಟ್ ಅಪ್‍ಗಳ ರಾಜಧಾನಿ ಎಂದೇ ಹೆಸರುವಾಸಿಯಾಗಿದೆ. ಕೈಗಾರಿಕಾ ಸೌಲಭ್ಯ ಅಧಿನಿಯಮವನ್ನು ಜಾರಿಗೊಳಿಸುವ ಮೂಲಕ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಬಹಳ ಸುಲಭವಾಗಿದೆ ಎಂದು ಜಗದೀಶ್ ಶೆಟ್ಟರ್ ಹೇಳೀದರು.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೈಗಾರಿಕೆಗಳು ಬಂಡವಾಳ ಹೂಡಿಕೆಗೆ ಮುಂದಾಗುತ್ತಿವೆ. ಆದರೆ, ರಾಜ್ಯದ ಇತರ ಎರಡನೆ ಹಾಗೂ ಮೂರನೆ ಹಂತದ ಜಿಲ್ಲೆಗಳಲ್ಲೂ ಬಂಡವಾಳ ಆಕರ್ಷಿಸಲು ಅನುಕೂಲ ಮಾಡಿಕೊಡುವಂತಹ ಕ್ರಾಂತಿಕಾರಿ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು.

ಇದು ಎರಡನೆ ಮತ್ತು ಮೂರನೆ ಹಂತದ ನಗರಗಳಲ್ಲಿ ಹೂಡಿಕೆ ಮಾಡುವ ಕೈಗಾರಿಕೆಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಿದೆ. ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆ ಹಾಗೂ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಉತ್ತಮ ಸಾರಿಗೆ ಸಂಫರ್ಕ, ಉತ್ತಮ ಮಾನವ ಸಂಪನ್ಮೂಲ ಸೇರಿದಂತೆ ಹಲವಾರು ಸೌಲಭ್ಯಗಳನ್ನು ರಾಜ್ಯ ಸರಕಾರ ನೀಡುತ್ತಿದೆ. ಇದರ ಉಪಯೋಗವನ್ನು ಮಾಡಿಕೊಳ್ಳುವಂತೆ ಉದ್ಯಮಿಗಳಿಗೆ ಜಗದೀಶ್ ಶೆಟ್ಟರ್ ಕರೆ ನೀಡಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮಾತನಾಡಿ, ಕರ್ನಾಟಕ ರಾಜ್ಯ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯನ್ನು ಘೋಷಿಸಿರುವ ರಾಜ್ಯವಾಗಿದೆ. ಇತ್ತೀಚಿಗೆ ಘೋಷಣೆ ಮಾಡಿರುವ ನೂತನ ಕೈಗಾರಿಕಾ ನೀತಿಯಲ್ಲಿಯೂ ಈ ಕ್ಷೇತ್ರಕ್ಕೆ ವಿಶೇಷ ಒತ್ತನ್ನು ನೀಡಲಾಗಿದೆ. ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ಹೂಡಿಕೆಗೆ ಹಲವಾರು ಅವಕಾಶಗಳಿದ್ದು, ಸಾಕಷ್ಟು ಸೌಲಭ್ಯಗಳನ್ನು ನೀಡಲಾಗಿದೆ ಎಂದು ಹೇಳಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣಾ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಟಾಟಾ ಹಿಟಾಚಿ ಕನ್ಸಸ್ಟ್ರಕ್ಷನ್‍ನ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ಸಿಂಗ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X