Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2,464 ಕೋಟಿ ರೂ. ಮೊತ್ತದ 34 ಏರೋಸ್ಪೇಸ್...

2,464 ಕೋಟಿ ರೂ. ಮೊತ್ತದ 34 ಏರೋಸ್ಪೇಸ್ ಉದ್ಯಮ ಒಪ್ಪಂದಗಳಿಗೆ ಕರ್ನಾಟಕದ ಸಹಿ

ಏರೋ ಇಂಡಿಯಾ-2021

ವಾರ್ತಾಭಾರತಿವಾರ್ತಾಭಾರತಿ5 Feb 2021 7:51 PM IST
share

ಬೆಂಗಳೂರು, ಫೆ.5: ಏಷ್ಯಾದಲ್ಲೆ ಅತಿ ದೊಡ್ಡ ಏರೋಸ್ಪೇಸ್ ಹಬ್ ಆಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಲು ಸಜ್ಜಾಗಿರುವ ಕರ್ನಾಟಕ, ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಗಳಿಗೆ ಸಂಬಂಧಿಸಿದ 2,464 ಕೋಟಿ ರೂ. ಮೊತ್ತದ 34 ಒಪ್ಪಂದಗಳಿಗೆ ಶುಕ್ರವಾರ ಸಹಿ ಹಾಕಿದೆ.

ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021ನಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಈ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್, "ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದಲ್ಲಿ ರಾಜ್ಯದ ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ" ಎಂದರು.

"ಏರೋಸ್ಪೇಸ್ ಮತ್ತು ರಕ್ಷಣಾ ಕಂಪನಿಗಳಿಗೆ ರಾಜ್ಯದಲ್ಲಿ ಈಗಾಗಲೇ ಪೂರಕ ಪರಿಸರ ವ್ಯವಸ್ಥೆ ಇದ್ದು, ಈ ಕೈಗಾರಿಕಾ ವಲಯಗಳಲ್ಲಿ ಅಗತ್ಯ ಭೂಮಿಯೂ ಲಭ್ಯವಿದೆ. ನೂತನ ಕೈಗಾರಿಕಾ ನೀತಿ 2020-25 ಅಡಿ ಹೂಡಿಕೆದಾರರಿಗೆ ಅನುಕೂಲಕರ ಅರ್ಥ ವ್ಯವಸ್ಥೆ ರೂಪಿಸಲು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅಗತ್ಯ ಕೌಶಲ ಹೊಂದಿರುವ ಕಾರ್ಮಿಕ ಕಾರ್ಯಪಡೆಯ ಲಭ್ಯತೆ ಜತೆಗೆ, ಕಾರ್ಮಿಕ ಕಾನೂನಿಲ್ಲೂ ಸುಧಾರಣೆ ತರಲಾಗಿದೆ. ಉತ್ತಮ ಸಂಪರ್ಕ ಹಾಗೂ ಲಾಜಿಸ್ಟಿಕ್ ವ್ಯವಸ್ಥೆ ಇದ್ದು, ಸುಲಲಿತ ವ್ಯವಹಾರಕ್ಕೆ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗಿದೆ' ಎಂದು ಅವರು ತಿಳಿಸಿದರು.   

"ನಿರ್ದಿಷ್ಟ ಏರೋಸ್ಪೇಸ್ ನೀತಿಯನ್ನು ರೂಪಿಸಿದ ದೇಶದ ಮೊದಲ ರಾಜ್ಯ ನಮ್ಮದು. ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದಲ್ಲಿ ರಾಜ್ಯ ಅಗ್ರ ಸ್ಥಾನದಲ್ಲಿದೆ. ಏರೋಸ್ಪೇಸ್‍ಗೆ ಸಂಬಂಧಿಸಿದ ದೇಶದ ಒಟ್ಟು ರಫ್ತಿನಲ್ಲಿ ನಮ್ಮ ಪಾಲು ಶೇ.65 ರಷ್ಟು. ಏರ್‍ಕ್ರಾಫ್ಟ್, ಬಾಹ್ಯಾಕಾಶಕ್ಕೆ ಸಂಬಂಧಿಸಿದ ಶೇ.25ರಷ್ಟು ಉದ್ಯಮಗಳು ನಮ್ಮಲ್ಲಿವೆ. ರಕ್ಷಣಾ ಸೇವೆಗೆ ಬಳಕೆಯಾಗುವ ಶೇ.67ರಷ್ಟು ಏರ್‍ಕ್ರಾಫ್ಟ್ ಮತ್ತು ಹೆಲಿಕಾಪ್ಟರ್ ಗಳ ಉತ್ಪಾದನೆ ಕರ್ನಾಟಕದಲ್ಲಿ ಆಗುತ್ತದೆ. ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದ ಪೂರಕ ಪರಿಸರ ವ್ಯವಸ್ಥೆ ನಮ್ಮಲ್ಲಿದ್ದು, ಈ ನೂತನ ಒಪ್ಪಂದಗಳ ಮುಂದಿನ ಗುರಿ ಸಾಧನೆಗೆ ನೆರವಾಗಲಿವೆ" ಎಂದು ಅವರು ತಿಳಿಸಿದರು.

ಪ್ರಮುಖ ಒಪ್ಪಂದಗಳು: ಅಭ್ಯುದಯ ಭಾರತ್ ಮೆಗಾ ಡಿಫೆನ್ಸ್ ಕ್ಲಸ್ಟರ್ 1000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿಹಾಕಿದ್ದು, ಗೋಪಾಲನ್ ಏರೋಸ್ಪೇಸ್ ಇಂಡಿಯಾ ಪ್ರೈ ಲಿ. 438, ಆಲ್ಫಾ ಡಿಸೈನ್ ಟೆಕ್ನಾಲಜಿಸ್ ಹಾಗೂ ಟೆಸ್‍ಬೆಲ್ ತಲಾ 250 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ಒಪ್ಪಂದ ಮಾಡಿಕೊಂಡಿವೆ ಎಂದು ಅವರು ತಿಳಿಸಿದರು.

ರಕ್ಷಣಾ ಉದ್ಯಮದ ನೆಲೆ: ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಷೇತ್ರದ ಸಾರ್ವಜನಿಕ ಉದ್ದಿಮೆಗಳಾದ ಎಚ್‍ಎಎಲ್, ಬಿಎಚ್‍ಇಎಲ್, ಭಾರತ್ ಎಲೆಕ್ಟ್ರಾನಿಕ್ಸ್ ನಮ್ಮ ಹೆಮ್ಮೆಯಾಗಿದೆ. ಇದರ ಜತೆಗೆ ದೇಶದ ಉನ್ನತ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಾದ ಡಿಆರ್‍ಡಿಒ, ಇಸ್ರೋ ಇತ್ಯಾದಿಗಳನ್ನು ಹೊಂದಿರುವ ಏಕೈಕ ರಾಜ್ಯ ಕರ್ನಾಟಕ. ದೇಶದ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದ ಶೇ.70ರಷ್ಟು ಪೂರೈಕೆದಾರರಿಗೆ ಕರ್ನಾಟಕ ನೆಲೆಯಾಗಿದೆ ಎಂದು ಜಗದೀಶ್್ ಶೆಟ್ಟರ್ ಹೇಳಿದರು.

ನೀತಿ ಆಯೋಗ 2019ರಲ್ಲಿ ಮೊದಲ ಬಾರಿಗೆ ಪ್ರಕಟಿಸಿದ್ದ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಕರ್ನಾಟಕ, 2020ರ ಪಟ್ಟಿಯಲ್ಲೂ ಅಗ್ರಸ್ಥಾನ ಉಳಿಸಿಕೊಂಡಿದೆ. ನುರಿತ ಮಾನವ ಸಂಪನ್ಮೂಲ ಲಭ್ಯತೆ, ಉನ್ನತ ಶಿಕ್ಷಣ ಸಂಸ್ಥೆಗಳು, ಪ್ರಮುಖ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಉತ್ತಮ ಆಡಳಿತ ಹಾಗೂ ಹೂಡಿಕೆಗೆ ಪೂರಕ ವಾತಾವರಣದಿಂದಾಗಿ ರಾಜ್ಯ ಅಗ್ರ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣಗೌಡ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X