Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ:...

ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ5 Feb 2021 11:17 PM IST
share
ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ಶಿವಮೊಗ್ಗ, ಫೆ.5: ತಾಲೂಕಿನ ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ಇನ್ನೂ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮೀನಿನ ಮಾಲಕರಾದ ಶಂಕರಗೌಡ ಟಿ.ಕುಲಕರ್ಣಿ(76), ಅವಿನಾಶ್ ಕುಲಕರ್ಣಿ (43) ಹಾಗೂ ಆಂಧ್ರ ಪ್ರದೇಶದ ಅನಂತಪುರಂ ನಿವಾಸಿಗಳಾದ ಪಿ.ಶ್ರೀರಾಮಲು(68) ಪಿ.ಮಂಜುನಾಥ್ ಸಾಯಿ (36) ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ‌ ಶಾಂತರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣ ಸಂಬಂಧ ಆರು ತನಿಖಾ ತಂಡಗಳನ್ನು ರಚಿಸಿದ್ದು, ತುಂಗಾನಗರ ಠಾಣೆ ಪಿಐ ದೀಪಕ್ ಮತ್ತು ಸೊರಬ ವೃತ್ತ ಸಿಪಿಐ ಮರುಳಸಿದ್ದಪ್ಪ ಅವರು ಆಂಧ್ರ ಪ್ರದೇಶದ ಆನಂತಪುರಂಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ರಾಯದುರ್ಗದಲ್ಲಿ ಶ್ರೀರಾಮಲು ಅವರಿಗೆ ಸಂಬಂಧಪಟ್ಟ ಸ್ಫೋಟಕಗಳ ದಾಸ್ತಾನು ಗೋದಾಮು ಇದೆ. ಅಲ್ಲಿ ಪರವಾನಗಿ ಪಡೆಯದೇ ಒಂದು ವಾಹನದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಅನಂತಪುರಂ ಜಿಲ್ಲೆಯ ಗುಮ್ಮಟಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ, ಆಂಧ್ರಪ್ರದೇಶದ ಪೊಲೀಸರು ಡೆಪ್ಯೂಟಿ ಕಂಟ್ರೋಲರ್ ಆಫ್ ಎಕ್ಸ್‌ಪ್ಲೋಸಿವ್ ಈ ಬಗ್ಗೆ ವಿಶಾಖಪಟ್ಟಣಂ ಅವರಿಗೆ ಪಿ.ಶ್ರೀರಾಮುಲು ಅವರು ಲೈಸೆನ್ಸ್ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ನೀಡಿದ್ದು, ಇವರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಫೆಬ್ರವರಿ 4ರಂದು ಭದ್ರಾವತಿ ಟೌನ್ ಸಿಪಿಐ ರಾಘವೇಂದ್ರ ಕಾಂಡಿಕೆ, ವಿನೋಬನಗರ ಪಿಎಸ್‌ಐ ಉಮೇಶ್, ಸಿಬ್ಬಂದಿ ನಾಗರಾಜ್, ಸಂದೀಪ್ ಅವರನ್ನು ಒಳಗೊಂಡ ತಂಡವು ಹಾವೇರಿ, ದಾವಣಗೆರೆ, ಜಗಳೂರು, ಚನ್ನಗಿರಿಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಫೋಟವಾದ ಜಮೀನಿನ ಮಾಲಕರಾದ ಶಂಕರ್‌ಗೌಡ ಮತ್ತು ಅವಿನಾಶ್ ಅವರನ್ನು ದಾವಣಗೆರೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆ ಪಿಐ ಅಭಯ್ ಪ್ರಕಾಶ್, ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್, ಎಎಸ್‌ಐ ವಿಜಯ್, ಸಿಬ್ಬಂದಿ ಕಿರಣ್ ಮೋರೆ ಅವರನ್ನೊಳಗೊಂಡ ತಂಡವು ಅನಂತಪುರಂ, ರಾಯದುರ್ಗ ಮುಂತಾದ ಕಡೆಗಳಿಗೆ ಭೇಟಿ ನೀಡಿ ನಂತರ ಹೈದರಾಬಾದ್‌ಗೆ ತೆರಳಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈಗೆ ತೆರಳಿ ಅಲ್ಲಿ ಶ್ರೀರಾಮುಲು ಮತ್ತು ಮಂಜುನಾಥ್ ಎಂಬುವವರನ್ನು ಬಂಧಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್.ಪಿ. ಎಚ್.ಟಿ.ಶೇಖರ್ ಇದ್ದರು.

ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಸ್ಫೋಟಕಗಳು ಪಿ. ಶ್ರೀರಾಮುಲು ಅವರ ಮಾಲಕತ್ವದಲ್ಲಿರುವ ಆಂಧ್ರಪ್ರದೇಶದ ಅನಂತಪುರಂನ ಗಣೇಶ್ ಟ್ರೇಡರ್ಸ್‌ ನಿಂದ ಪೂರೈಕೆಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದಲ್ಲಿ ಇರುವರೆಗೆ 8 ಜನರನ್ನು ಬಂಧಿಸಲಾಗಿದೆ.
- ಕೆ.ಎಂ.ಶಾಂತರಾಜು, ಎಸ್‌ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X