ಮಧ್ಯಪ್ರದೇಶ: 4 ವರ್ಷದ ಬಾಲಕಿಯ ಅತ್ಯಾಚಾರಗೈದು ಹತ್ಯೆ

ಭೋಪಾಲ್, ಫೆ. 5: ಅತ್ಯಾಚಾರ ಪ್ರಕರಣವೊಂದರಲ್ಲಿ ಜಾಮೀನು ಮೂಲಕ ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯೊರ್ವ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಕಳೆದ ವರ್ಷ ಜೂನ್‌ನಲ್ಲಿ 40 ವರ್ಷದ ಆರೋಪಿ ಬಾಲಕಿಯ ಅತ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೈಲು ಸೇರಿದ್ದ. ಎರಡು ವಾರಗಳ ಹಿಂದೆ ಆತ ಜಾಮೀನಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ.
ಬಾಲಕಿ ಗ್ರಾಮದಿಂದ ಬುಧವಾರ ನಾಪತ್ತೆಯಾಗಿದ್ದಳು. ಸಂಜೆ ಕುಟುಂಬದ ಸದಸ್ಯರು ಶೋಧ ನಡೆಸಿದಾಗ ಬಾಲಕಿಯ ಮೃತದೇಹ ಮನೆಯಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಸಾಸಿವೆ ಹೊಲದಲ್ಲಿ ಪತ್ತೆಯಾಗಿತ್ತು. ತಂದೆ ತಾಯಿ ಬೇರೆ ರಾಜ್ಯದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದುದರಿಂದ ಬಾಲಕಿ ಅಜ್ಜ ಅಜ್ಜಿಯೊಂದಿಗೆ ಇದ್ದಳು.
Next Story





