ಉಡುಪಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಕುರಿತು ಚರ್ಚೆ: ಸಚಿವ ಬಿ.ಎ.ಬಸವರಾಜು

ಬೆಂಗಳೂರು, ಫೆ.5: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ತಿಳಿಸಿದರು.
ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ರಘುಪತಿ ಭಟ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಗರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಉಡುಪಿ ಜಿಲ್ಲಾಧಿಕಾರಿ ಅನುಮೋದನೆ ಕೋರಿದ್ದು, ಪೌರಾಡಳಿತ ನಿರ್ದೇಶನಾಲಯಕ್ಕೆ ಯೋಜನೆಯ ಡಿಪಿಆರ್‍ನೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂದರು.
ಇನ್ನು, ಈ ಯೋಜನೆಯಿಂದ ಆಗುವ ಆರ್ಥಿಕ ಪರಿಣಾಮ, ಅಂದಾಜು ವೆಚ್ಚ ಸೇರಿದಂತೆ ಇನ್ನಿತರೆ ಪ್ರಕ್ರಿಯೆಗಳ ಬಗ್ಗೆ ಸ್ಪಷ್ಟನೆ ಅವಶ್ಯಕತೆ ಇದೆ ಎಂದು ತಿಳಿಸಿದರು.
Next Story





