Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಗುಂಬೆ: ಪ್ರಾಣಿಗಳಿಗೆ ಆಹಾರ ತಿನಿಸುವವರ...

ಆಗುಂಬೆ: ಪ್ರಾಣಿಗಳಿಗೆ ಆಹಾರ ತಿನಿಸುವವರ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Feb 2021 10:27 PM IST
share
ಆಗುಂಬೆ: ಪ್ರಾಣಿಗಳಿಗೆ ಆಹಾರ ತಿನಿಸುವವರ ವಿರುದ್ಧ ಅರಣ್ಯ ಇಲಾಖೆ ಕಾರ್ಯಾಚರಣೆ

ಉಡುಪಿ, ಫೆ.6: ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಆಗುಂಬೆ ಘಾಟಿ ಯಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ತಿನಿಸುವವರು ಮತ್ತು ರಸ್ತೆ ಬದಿ ಆಹಾರ ಪೊಟ್ಟಣಗಳನ್ನು ಎಸೆಯುವವರ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗವು ವಾರಾಂತ್ಯದಲ್ಲಿ ಕಾರ್ಯಾಚರಣೆಗೆ ಇಳಿದಿದೆ.

ಈ ಹಿನ್ನೆಲೆಯಲ್ಲಿ ಇಂದು ಸೋಮೇಶ್ವರದಿಂದ ಆಗುಂಬೆವರೆಗಿನ 10ಕಿ.ಮೀ. ರಸ್ತೆಯುದ್ದಕ್ಕೂ ಹೆಬ್ರಿ, ಕಾರ್ಕಳ, ಅಮಾಸೆಬೈಲು ಮತ್ತು ಸಿದ್ಧಾಪುರ ವನ್ಯ ಜೀವಿ ವಿಭಾಗದ ಸುಮಾರು 40 ಮಂದಿ ಸಿಬ್ಬಂದಿಗಳು ನಿಂತು, ಪ್ರಾಣಿಗಳಿಗೆ ಆಹಾರ ತಿನಿಸುವ ಮತ್ತು ರಸ್ತೆ ಬದಿ ಆಹಾರ ಪೊಟ್ಟಣ, ಪ್ಲಾಸ್ಟಿಕ್ ಎಸೆಯುವ ವಾಹನ ಚಾಲಕರಿಂದ ದಂಡ ವಸೂಲಿ ಮಾಡಿದರು.

ಹೀಗೆ ರಸ್ತೆ ಬದಿ ಆಹಾರ ಎಸೆದ ಮೂವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗಳು ದಂಡ ವಿಧಿಸಿದರು. ಅದೇ ರೀತಿ ಘಾಟಿ ಆರಂಭದ ಸೋಮೇಶ್ವರ ದಲ್ಲಿ ಮತ್ತು ಆಗುಂಬೆ ಕೊನೆಯಲ್ಲಿ ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ನಡೆಸಿದರು. ಇಲ್ಲಿ ಜಾಗೃತಿ ಫಲಕಗಳನ್ನು ನೆಟ್ಟು ಜನಜಾಗೃತಿ ಮೂಡಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಸಿದ್ಧಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ಭಗವಸ್‌ ದಾಸ್ ಕುಡ್ತಲ್‌ಕರ್, ಹೆಬ್ರಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್, ಅಮಾಸೆಬೈಲು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ನಿಗದಿ ಪಡಿಸಿದ ದಂಡ

ರಸ್ತೆಬದಿ ತ್ಯಾಜ್ಯ, ಪ್ಲಾಸ್ಟಿಕ್ ಕಸ ಇತ್ಯಾದಿ ಎಸೆಯುವುದಕ್ಕೆ 100ರೂ., ರಸ್ತೆ ಬದಿ ಪೂರ್ವಾನುಮತಿ ಇಲ್ಲದೆ ಅರಣ್ಯಕ್ಕೆ ಪ್ರವೇಶ ಮಾಡುವುದು, ರಸ್ತೆಯ ಬದಿಯ ಜಲಪಾತಗಳಲ್ಲಿ ಸ್ನಾನ ಮಾಡುವುದು, ರಸ್ತೆಯಲ್ಲಿ ವಾಹನ ತೊಳೆಯುವುದು, ಅಡುಗೆ ತಯಾರಿಸುವುದು, ರಾಷ್ಟ್ರೀಯ ಉದ್ಯಾನವನದ ಒಳಗೆ ಸಕಾರಣವಿಲ್ಲದೆ ನಿಗದಿಪಡಿಸಿದ ಅವಧಿಗಿಂತ ಹೆಚ್ಚು ಸಮಯ ಉಳಿಯುವುದಕ್ಕೆ ತಲಾ 200ರೂ. ಮತ್ತು ವನ್ಯ ಪ್ರಾಣಿಗಳಿಗೆ ತಿಂಡಿ ತಿನಿಸು ನೀಡುವುದಕ್ಕೆ 50 ರೂ. ದಂಡವನ್ನು ನಿಗದಿಪಡಿಸಲಾಗಿದೆ.

‘ಈ ಕಾರ್ಯಾಚರಣೆಯನ್ನು ಆಗುಂಬೆ ಘಾಟಿಯ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾದು ಹೋಗುವ ಶನಿವಾರ ಮತ್ತು ರವಿವಾರ ನಡೆಸಲಾಗುತ್ತಿದೆ. ಮನುಷ್ಯ ಸೇವಿಸುವ ಆಹಾರ, ಜಂಕ್ ಫುಡ್‌ಗಳನ್ನು ಪ್ರಾಣಿ ಗಳಿಗೆ ನೀಡುವುದರಿಂದ ಅದರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಲ್ಲದೆ ಅದರ ಆಹಾರ ಕ್ರಮಗಳನ್ನು ಬದಲಾಗಿ, ಇದೇ ಆಹಾರಕ್ಕೆ ಹೊಂದಿ ಕೊಳ್ಳುವ ಸಾಧ್ಯತೆ ಇರುತ್ತದೆ. ಆಹಾರ ಸಿಗದೆ ಇದ್ದಾಗ ಮಕ್ಕಳು, ಮನುಷ್ಯರ ಮೇಲೆ ದಾಳಿ ನಡೆಸುವ ಅಪಾಯ ಇರುತ್ತದೆ. ಅಲ್ಲದೆ ರೋಗ ಹರಡುವಿಕೆಗೂ ಕಾರಣವಾಗುತ್ತದೆ’

-ಅನಿಲ್ ಕುಮಾರ್, ವಲಯ ಅರಣ್ಯಾಧಿಕಾರಿ, ಹೆಬ್ರಿ ವನ್ಯಜೀವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X