ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ
ಮಂಗಳೂರು, ಫೆ.6: ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.
10 ವರ್ಷದ ಬಾಲಕಿ ತನ್ನ ನೆರೆಯ ಮನೆಗೆ ಆಟವಾಡಲು ಹೋಗಿದ್ದಾಗ, ಯುವಕ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದು, ಈ ಬಗ್ಗೆ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿದ ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





