Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಗೌರವ, ನಂಬಿಕೆಗೆ ಹೆಚ್ಚು...

ದೇಶದಲ್ಲಿ ಗೌರವ, ನಂಬಿಕೆಗೆ ಹೆಚ್ಚು ಪಾತ್ರವಾಗಿರುವುದು ನಮ್ಮ ನ್ಯಾಯಾಂಗ ವ್ಯವಸ್ಥೆ: ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ6 Feb 2021 11:29 PM IST
share
ದೇಶದಲ್ಲಿ ಗೌರವ, ನಂಬಿಕೆಗೆ ಹೆಚ್ಚು ಪಾತ್ರವಾಗಿರುವುದು ನಮ್ಮ ನ್ಯಾಯಾಂಗ ವ್ಯವಸ್ಥೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಫೆ.6: ದೇಶದಲ್ಲಿ ಈಗಲೂ ಸಹ ಸಾರ್ವಜನಿಕರ ಗೌರವ ಮತ್ತು ನಂಬಿಕೆಗೆ ಹೆಚ್ಚು ಪಾತ್ರವಾಗಿರುವುದು ನಮ್ಮ ನ್ಯಾಯಾಂಗ ವ್ಯವಸ್ಥೆಯಾಗಿದ್ದು, ನಮ್ಮ ನ್ಯಾಯಾಂಗ ವ್ಯವಸ್ಥೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ದಾವೆಗಳನ್ನು ನಿಭಾಯಿಸುವ ಶಕ್ತಿಯುತವಾದ ವ್ಯವಸ್ಥೆಯನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಕರ್ನಾಟಕ ಉಚ್ಛ ನ್ಯಾಯಾಲಯ, ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ ಜಂಟಿಯಾಗಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಾಗಾರಿ, ನೂತನ ಕಟ್ಟಡ ಉದ್ಘಾಟನೆ ಮತ್ತು ನೂತನ ಕಟ್ಟಡ ಅಡಿಗಲ್ಲು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಪ್ರತಿ ವ್ಯಕ್ತಿಯ ಹಕ್ಕನ್ನು ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದೆ ಎಂದರು.

ನ್ಯಾಯಾಂಗ ವ್ಯವಸ್ಥೆಗೆ ಮೂಲಸೌಕರ್ಯ ಒದಗಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಯಾಗಿದ್ದು, ಇಂದು ಉದ್ಘಾಟನೆಗೊಂಡಿರುವ ವಾಣಿಜ್ಯ ನ್ಯಾಯಾಲಯಗಳು ವಾಣಿಜ್ಯ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ಕಕ್ಷಿದಾರರಿಗೆ ನೆಮ್ಮದಿ ತರಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಕರ್ನಾಟಕ ಉಚ್ಛ ನ್ಯಾಯಾಲಯ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ಮಾತಾನಾಡಿ, ಭಾರತದ ನ್ಯಾಯಾಲಯ ವ್ಯವಸ್ಥೆ ಅತ್ಯಂತ ಸುಭದ್ರವಾಗಿದ್ದು, ಕೋವಿಡ್-19 ಸಮಯದಲ್ಲಿ ಸಹ ಆನ್‍ಲೈನ್ ಮೂಲಕ ವ್ಯಾಜ್ಯ ಪ್ರಕರಣಗಳನ್ನು ನಡೆಸಲಾಯಿತು. ಕರ್ನಾಟಕದ ಹಲವೆಡೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಶಾಖಾ ಕಚೇರಿಗಳನ್ನು ತೆರೆದು ಸಾರ್ವಜನಿಕರಿಗೆ ಶೀಘ್ರದಲ್ಲಿ ನ್ಯಾಯ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಭಾರತದ ಸವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಮಾತನಾಡಿ, ವಾಣಿಜ್ಯ ವ್ಯಾಜ್ಯಗಳಿಗಾಗಿ ಪ್ರತ್ಯೇಕ ನ್ಯಾಯಲಯ ಸ್ಥಾಪಿಸವುದರ ಮೂಲಕ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ನೂತನ ಪರ್ವವೊಂದು ಆರಂಭ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದಿನ ತಂತ್ರಜ್ಞಾನದ ವ್ಯವಸ್ಥೆ ನ್ಯಾಯಾಲಯ ಬಳಸಿಕೊಳ್ಳುತ್ತಿದ್ದು, ವ್ಯಾಜ್ಯಗಳ ತ್ವರಿತ ವಿಲೇವಾರಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೊರ ತಂದಿರುವ ಥೀಮ್ ಸಾಂಗ್ ಅತ್ಯಂತ ಇಂಪಾಗಿದ್ದು ಅರ್ಥಗರ್ಭಿತವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸವೋಚ್ಛ ನ್ಯಾಯಾಲಯದ ಮತ್ತೊಬ್ಬ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಮಾತಾನಡಿ ಇದೊಂದು ಹೈಬ್ರಿಡ್ ಕಾಲವಾಗಿದ್ದು, ಇಂದಿನ ಕಾರ್ಯಕ್ರಮ ಸಹ ಒಂದು ರೀತಿಯಲ್ಲಿ ಹೈಬ್ರಿಡ್ ಕಾರ್ಯಕ್ರಮವಾಗಿದೆ. ನ್ಯಾಯಮೂರ್ತಿಗಳಾದ ಮೋಹನ್ ಎಮ್ ಶಾಂತನಗೌಡ ಅವರು ದೆಹಲಿಯಲ್ಲಿ ಕುಳಿತು ಇಂದಿನ ಕಾರ್ಯಕ್ರಮಕ್ಕೆ ಇ-ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದ್ದು ವಿಶೇಷವಾಗಿತ್ತು ಎಂದು ಹೇಳಿದರು.

ಇಂದಿನ ಕಾರ್ಯಕ್ರಮದಲ್ಲಿ ಎರಡು ನೂತನ ಕಟ್ಟಡಗಳಿಗೆ ಶಿಲನ್ಯಾಸ ಹಾಗೂ ಮೂರು ನೂತನ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹೊರ ತಂದಿರುವ ಗೀತೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನ್ಯಾಯಮೂರ್ತಿಗಳಾದ ಶ್ರೀಮತಿ ಬಿ.ವಿ.ನಾಗರತ್ನ, ಭಾರತ ಸರ್ಕಾರದ ಸಾಲಿಸಿಟರ್ ಜನರಲ್ ಎಮ್.ಬಿ.ನರಗುಂದ, ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನ್ಯಾಯಮೂರ್ತಿ ಸತೀಶ್‍ಚಂದ್ರ ಶೆಟ್ಟಿ ಅವರು ಸ್ವಾಗತ ಕೋರಿದರು ಹಾಗೂ ನ್ಯಾಯಾಮೂರ್ತಿ ಅರವಿಂದ ಕುಮಾರ್ ಅವರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X