ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿನಿಲಯ ದಾಖಲಾತಿ: ಅರ್ಜಿ ಆಹ್ವಾನ
ಮಂಗಳೂರು, ಫೆ.6: ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಾದ ಬೋಳಾರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಚಿಲಿಂಬಿ, ದೇರಳಕಟ್ಟೆ, ಗುರುಕಂಬಳ, ಬೆಂಜನಪದವು ಹಾಗೂ ಕಡಬ ತಾಲೂಕಿನಲ್ಲಿ ವಿದ್ಯಾರ್ಥಿನಿಲಯಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿ ಕಚೇರಿ, ಮೌಲಾನ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಮಂಗಳೂರು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಅವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





