Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲವರ್ಧನೆಗೆ...

ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲವರ್ಧನೆಗೆ ಹೆಚ್ಚಿನ ಆದ್ಯತೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ7 Feb 2021 5:12 PM IST
share
ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲವರ್ಧನೆಗೆ ಹೆಚ್ಚಿನ ಆದ್ಯತೆ ಅಗತ್ಯ: ರಾಷ್ಟ್ರಪತಿ ಕೋವಿಂದ್

ಬೆಂಗಳೂರು, ಫೆ.7: ಈ ಶತಮಾನದ ಮೊದಲ ಸಾಂಕ್ರಾಮಿಕವಾಗಿ ಕೋವಿಡ್ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಈ ಸಾಂಕ್ರಾಮಿಕದಿಂದಾಗಿ ವಿಶ್ವವು ಸಾಕಷ್ಟು ಪಾಠಗಳನ್ನು ಕಲಿತಿದೆ. ಕೋವಿಡ್ ನಂತರದ ಕಾಲಘಟ್ಟದಲ್ಲಿ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

ರವಿವಾರ ನಗರದ ನಿಮ್ಹಾನ್ಸ್ ಕನ್ವೇನ್ಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 23ನೆ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನುದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ಕೋವಿಡ್ ಸಾಂಕ್ರಾಮಿಕವಾಗಿ ಜಾಗತಿಕವಾಗಿ ಸಹೋದರತ್ವದ ಸಂದೇಶವನ್ನು ನಮಗೆ ನೀಡಿದೆ. ಒಬ್ಬರು ಸಂಕಷ್ಟದಲ್ಲಿರುವಾಗ ಮತ್ತೊಬ್ಬರು ಸುರಕ್ಷಿತವಾಗಿರಲು ಸಾಧ್ಯವಿಲ್ಲ. ‘ಸರ್ವೇ ಭವಂತು ಸುಖಿನಃ, ಸರ್ವೆ ಸಂತು ನಿರಾಮಾಯ’. ನಾವೆಲ್ಲರೂ ಸಂತೋಷವಾಗಿರಬೇಕು, ಅಲ್ಲದೆ, ನಾವೆಲ್ಲರೂ ಅನಾರೋಗ್ಯದಿಂದ ಮುಕ್ತರಾಗಿರಬೇಕು ಎಂದು ರಾಷ್ಟ್ರಪತಿ ಹೇಳಿದರು.

ಆರೋಗ್ಯ ವಿಜ್ಞಾನದ ವಿದ್ಯಾರ್ಥಿಗಳಾಗಿ ನೀವು ಅಧ್ಯಯನ ಮಾಡುತ್ತಿರುವ ಈ ವಿಷಯಗಳು ಬಹುಮುಖ್ಯವಾದ ಜ್ಞಾನದ ಭಂಡಾರವಾಗಿದೆ. ನೋವನ್ನು ಕಡಿಮೆ ಮಾಡುವ, ಜೀವಗಳನ್ನು ರಕ್ಷಿಸುವ ಪವಿತ್ರವಾದ ಕೆಲಸ ನಿಮ್ಮಿಂದಾಗುತ್ತದೆ. ಭಾರತವು ಆರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಆಯುರ್ವೇದದ ಹೆಸರಿನಲ್ಲಿ ಅದ್ಭುತವಾದ ಜ್ಞಾನವನ್ನು ವೃದ್ಧಿಸಿದೆ. ನಿಮ್ಮ ಜ್ಞಾನ ಭಂಡಾರವು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿತು ಎಂದು ಅವರು ತಿಳಿಸಿದರು.

ಕೋವಿಡ್-19 ಸೋಂಕು ಇಡೀ ಜಗತ್ತನ್ನು ತಲ್ಲಣಗೊಳಿಸಿತು. ನಮ್ಮ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಈ ಸವಾಲನ್ನು ಸ್ವೀಕರಿಸಿ ಮುನ್ನಡೆದ ರೀತಿ ಶ್ಲಾಘನೀಯವಾದದ್ದು. ನಮ್ಮ ದೇಶದಲ್ಲಿ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಅಸಂಖ್ಯಾತ ಜೀವಗಳನ್ನು ರಕ್ಷಿಸಲು ಸಾಧ್ಯವಾಯಿತು. ಇದರಲ್ಲಿ ರಾಜೀವ್‍ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಪಾತ್ರವು ಪ್ರಮುಖವಾಗಿದೆ ಎಂದು ರಾಷ್ಟ್ರಪತಿ ತಿಳಿಸಿದರು.

ಈ ವಿಶ್ವವಿದ್ಯಾಲಯವು ವೈದ್ಯರು, ನರ್ಸ್ ಗಳು, ಆಡಳಿತಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಸುಮಾರು 2 ಲಕ್ಷ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವೃತ್ತಿಪರರನ್ನು ತಯಾರುಗೊಳಿಸಿದೆ ಎಂಬುದು ಹೆಮ್ಮೆಯ ಸಂಗತಿ. ಕೊರೋನ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ನಿಮ್ಮಂತಹ ಆರೋಗ್ಯ ವಿಜ್ಞಾನಿಗಳು ಮುಂಚೂಣಿಯಲ್ಲಿದ್ದ ಪರಿಣಾಮವಾಗಿ, ದಾಖಲೆಯ ಅವಧಿಯಲ್ಲಿ ಹಲವಾರು ಲಸಿಕೆಗಳು ತಯಾರಿಸಲು ಸಾಧ್ಯವಾಯಿತು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಆತ್ಮನಿರ್ಭರ್ ಭಾರತ್ ಯೋಜನೆಯ ಸಾಕಾರಕ್ಕಾಗಿ ನಮ್ಮ ದೇಶವು ಕೇವಲ ಭಾರತಕ್ಕೆ ಸೀಮಿತವಾಗಿ ಲಸಿಕೆಗಳನ್ನು ಸಿದ್ಧಪಡಿಸಿಲ್ಲ, ಬದಲಾಗಿ ವಿಶ್ವದ ಇತರ ದೇಶಗಳಿಗೂ ಲಸಿಕೆಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆದು ನಿಂತಿದೆ. ಭಾರತವು ಐತಿಹಾಸಿಕವಾದ ಲಸಿಕಾ ಅಭಿಯಾನಕ್ಕೆ ಸಾಕ್ಷಿಯಾಗುತ್ತಿದೆ ಎಂದು ರಾಷ್ಟ್ರಪತಿ ಹೇಳಿದರು.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಜಗತ್ತಿನ ವಿವಿಧ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಸಂಸ್ಥೆಯಾಗಿದೆ. ಆರೋಗ್ಯ ಕ್ಷೇತ್ರದ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಆವಿಷ್ಕಾರಗಳಿಗೆ ಈ ಸಂಸ್ಥೆ ಸಾಕ್ಷಿಯಾಗಿದೆ. ಜಾಗತಿಕ ಮಟ್ಟದಲ್ಲಿ ಈ ಸಂಸ್ಥೆಯು ತನ್ನ ಗೌರವವನ್ನು ಉಳಿಸಿಕೊಂಡಿದೆ ಎಂದು ಅವರು ತಿಳಿಸಿದರು.

ಈ ವಿವಿಯು ಭಾರತದಲ್ಲಿ ಸುಮಾರು 800 ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಆಯುರ್ವೇದ, ಯುನಾನಿ, ನಾಚುರೋಪತಿ ಹಾಗೂ ಯೋಗ ವಿಜ್ಞಾನ, ಹೊಮಿಯೋಪತಿ, ಫಾರ್ಮಸಿ ಕೋರ್ಸುಗಳನ್ನು ಹೊಂದಿದೆ. ಸಂಶೋಧನೆ ಮತ್ತು ಅಭಿವೃದ್ಧಿಯ ಮೂಲಕ ಈ ವಿವಿಯು ಹಲವಾರು ಪ್ರಥಮಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಇವತ್ತಿನ ಘಟಿಕೋತ್ಸವದಲ್ಲಿ ಸುಮಾರು 28 ಸಾವಿರ ಪದವೀಧರರು, 6 ಸಾವಿರ ಸ್ನಾತಕೋತ್ತರ ಪದವೀಧರರು ಹಾಗೂ 200 ಅಭ್ಯರ್ಥಿಗಳು ಸೂಪರ್ ಸ್ಪೆಷಾಲಿಟಿ, ಫೆಲೋಶಿಪ್, ಸರ್ಟಿಫಿಕೇಟ್ ಕೋರ್ಸಸ್ ಮತ್ತು ಪಿಎಚ್‍ಡಿ ಅಭ್ಯರ್ಥಿಗಳಿಗೆ ಪದವಿಯ ಗೌರವ ನೀಡಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿನ ವೃತ್ತಿಪರರ ಹೆಚ್ಚಳದಿಂದ ಭಾರತವು ಈ ಕ್ಷೇತ್ರದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲಿದೆ ಎಂದು ರಾಷ್ಟ್ರಪತಿ ತಿಳಿಸಿದರು.

ಪದವೀಯನ್ನು ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳ ಕಲಿಕೆ ಪೂರ್ಣವಾಗಿಲ್ಲ. ಶಿಕ್ಷಣದ ಒಂದು ಹಂತ ಮಾತ್ರ ಮುಗಿದಿದೆ. ಇನ್ನೂ ಮುಂದೆ ನಿಮ್ಮ ಅಧ್ಯಯನ ನಿರಂತರವಾಗಿರುತ್ತದೆ. ನಿಮ್ಮ ಜ್ಞಾನ ಹಾಗೂ ಕೌಶಲ್ಯ ಜನರಿಗೆ ರೋಗದಿಂದ ಮುಕ್ತಿ ಕೊಡುವುದಲ್ಲದೆ, ಅವರ ಜೀವವನ್ನು ರಕ್ಷಣೆಯನ್ನು ಮಾಡುತ್ತದೆ. ಆದುದರಿಂದ, ಜನಸಾಮಾನ್ಯರು ವೈದ್ಯರನ್ನು ದೇವದೂತರನ್ನಾಗಿ ಪರಿಗಣಿಸುತ್ತಾರೆ ಎಂದು ಅವರು ತಿಳಿಸಿದರು.

ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ, ಕುಲಸಚಿವರಾದ ಶಿವಾನಂದ ಕಾಪಶಿ, ಡಾ.ಎನ್.ರಾಮಕೃಷ್ಣ ರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆರೋಗ್ಯ ಕ್ಷೇತ್ರದಲ್ಲಿ ಮಹತ್ಸಾಧನೆಗೈದ ಡಾ.ಅಲಂಗಾರ್ ಸತ್ಯರಂಜನ್‍ದಾಸ್ ಹೆಗ್ಡೆ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಗೌರವ ಪದವಿಯನ್ನು ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರದಾನ ಮಾಡಿದರು.

ಭವಿಷ್ಯದ ಭಾರತ ಮಹಿಳೆಯರು ಮುನ್ನಡೆಸಲಿದ್ದಾರೆ

ನಾನು ಈಗ ಪ್ರದಾನ ಮಾಡಿದ 12 ಸ್ವರ್ಣ ಪದಕಗಳ ಪೈಕಿ 8 ಸ್ವರ್ಣ ಪದಕಗಳನ್ನು ನಮ್ಮ ಹೆಣ್ಣು ಮಕ್ಕಳು ಸ್ವೀಕರಿಸಿದ್ದಾರೆ. ಅದೇ ರೀತಿ ಒಟ್ಟಾರೆ 111 ಸ್ವರ್ಣ ಪದಕ ವಿಜೇತರ ಪೈಕಿ 87 ಸ್ವರ್ಣ ಪದಕಗಳು ಹೆಣ್ಣು ಮಕ್ಕಳ ಪಾಲಾಗಿದೆ. ಇದು ಶೇ.80ರಷ್ಟು ಸಾಧನೆಯಾಗಿದೆ. ಆರೋಗ್ಯ ವಿಜ್ಞಾನಗಳು ಸೇರಿದಂತೆ ಇನ್ನಿತರ ವಲಯಗಳಲ್ಲಿ ಭವಿಷ್ಯದ ಭಾರತವನ್ನು ಮಹಿಳೆಯರು ಮುನ್ನಡೆಸಲಿದ್ದಾರೆ. ಈ ಮಹತ್ವದ ಸಾಧನೆಗಾಗಿ ನಾನು ಈ ಹೆಣ್ಣು ಮಕ್ಕಳ ಪೋಷಕರು, ಬೋಧಕ ವರ್ಗದವರು, ಆಡಳಿತ ಮಂಡಳಿಯ ಸದಸ್ಯರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

-ರಾಮನಾಥ್ ಕೋವಿಂದ್, ರಾಷ್ಟ್ರಪತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X