Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಲು...

ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಲು ಜ್ಞಾನ ಅಗತ್ಯ: ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ7 Feb 2021 5:47 PM IST
share
ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಲು ಜ್ಞಾನ ಅಗತ್ಯ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಫೆ. 7: ಸರಕಾರ ರೂಪಿಸುವ ಜನಪರ ಯೋಜನೆಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರ, ಸರಳವಾಗಿ ದಾಟಿಸಬಹುದು. ಈ ಕಾರ್ಯಗಳನ್ನು ಸಮರ್ಥವಾಗಿ ಮಾಡುವ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಲಹೆ ಮಾಡಿದ್ದಾರೆ.

ರವಿವಾರ ನಗರದಲ್ಲಿ ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ಇವತ್ತು ಪರಿಣಾಮಕಾರಿಯಾಗಿ ಬೆಳೆದಿವೆ. ಇವುಗಳನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಹಾಗೂ ಆ ಬಗ್ಗೆ ನಿಪುಣತೆಯನ್ನು ಸಾಧಿಸಿಕೊಳ್ಳಬೇಕು ಎಂದು ಹೇಳಿದರು.

ಮಾಧ್ಯಮ ಕ್ಷೇತ್ರ ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದೆ. ಸಾಂಪ್ರದಾಯಿಕ ಮಾಧ್ಯಮ ಒಂದೆಡೆಯಾದರೆ, ಸಾಮಾಜಿಕ ಜಾಲತಾಣಗಳ ರೂಪದಲ್ಲಿ ನವ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಇಂಥ ಸಂದರ್ಭದಲ್ಲಿ ಜಾಲತಾಣಗಳಲ್ಲಿ ಪಕ್ಷದ ಧ್ವನಿ ಮೊಳಗಿಸಬೇಕಾದರೆ ಅದಕ್ಕೆ ಅಗತ್ಯವಾದ ಜ್ಞಾನ, ಅಧ್ಯಯನ, ಪೂರ್ವಸಿದ್ಧತೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ ಎಂದು ಅವರು ಒತ್ತಿ ಹೇಳಿದರು.

ಸರಕಾರ ಯಾವ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ? ಆ ಕಾರ್ಯಕ್ರಮಗಳು ಯಾರಿಗಾಗಿ? ಅವುಗಳ ಉದ್ದೇಶವೇನು? ಎಂಬ ಅಂಶಗಳ ಬಗ್ಗೆ ಅರಿವು ಹೊಂದಿರಬೇಕು. ಅದೇ ರೀತಿ ಜನಪರವಾಗಿ ಪಕ್ಷ ಯಾವ ದಿಕ್ಕಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬ ತಿಳಿವಳಿಕೆಯೂ ಇರಬೇಕು ಎಂದು ಅವರು ವಿವರಿಸಿದರು.

ಸಂಸದ ಪಿ.ಸಿ.ಮೋಹನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಾಲತಾಣ ವಿಭಾಗದ ಸಂಚಾಲಕ ವಿನೋದ್ ಕೃಷ್ಣಮೂರ್ತಿ, ಸಹ ಸಂಚಾಲಕ ಪ್ರಶಾಂತ್ ಜಾಧವ್ ಉಪಸ್ಥಿತರಿದ್ದರು. ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಪ್ರಕೋಷ್ಠದಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X