Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Feb 2021 7:46 PM IST
share
ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ. 7: ‘ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದವರು, ಸೋತವರು, ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲರೂ ನಮ್ಮ ಹುಡುಗರೇ. ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು, ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಅವರ ಗುರಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದಲ್ಲಿ ಆಂತರಿಕವಾಗಿ ಚುನಾವಣೆ ನಡೆದಿದೆ. ಅದರ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಗೆಲುವು-ಸೋಲು ನನಗೆ ಮುಖ್ಯ ಅಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಹೋರಾಟದ ಛಲ ತೋರಿರುವುದು ಬಹಳ ಮುಖ್ಯ. ಗೆದ್ದವರು ಹಾಗೂ ಸೋತವರನ್ನು ಸಮಾನಾಗಿ ತೆಗೆದುಕೊಂಡು ಹೋಗುವ ಕೆಲಸ ನಾನು ಮಾಡುತ್ತೇನೆ ಎಂದರು.

ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಕಾಳಜಿ ಮುಖ್ಯ. ನಾವು ಎಲ್ಲರ ಶಕ್ತಿಯನ್ನು ಬಳಕೆ ಮಾಡಿಕೊಳ್ಳಬೇಕು. ಅದನ್ನು ಮಾಡುತ್ತೇವೆ. ಈ ಫಲಿತಾಂಶದಿಂದ ಯಾವ ಗೊಂದಲವೂ ಸೃಷ್ಟಿ ಆಗಿಲ್ಲ. ಕೇಸಿನ ವಿಚಾರವಾಗಿ ಕೆಲವು ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಮೇಲೂ ಬಿಜೆಪಿ ಸ್ನೇಹಿತರು ಕೇಸು ಹಾಕಿಸಿದ್ದಾರೆ. ಹೈಕಮಾಂಡ್ ಯಾರನ್ನು ನೇಮಕ ಮಾಡುತ್ತದೆಯೋ ಅವರ ಜತೆಗೂ ಕೆಲಸ ಮಾಡುತ್ತೇನೆ. ಯಾರು ನೇಮಕ ಆಗುವುದಿಲ್ಲವೋ ಅವರನ್ನೂ ಸೇರಿಸಿಕೊಂಡು ಕೆಲಸ ಮಾಡುತ್ತೇನೆ. ಅವರಲ್ಲೂ ನಾಯಕತ್ವ ಗುಣಗಳಿವೆ. ನಾನು ವಿದ್ಯಾರ್ಥಿ ಚುನಾವಣೆಯಲ್ಲಿ ಮೊದಲು ಸೋತಿದ್ದೆ. ನಂತರ ಗೆದ್ದೆ ಎಂದು ಹೇಳಿದರು.

ಸಚಿವರು ಹೋರಾಟ ಮಾಡುತ್ತಿರುವುದು ಅಚ್ಚರಿ: ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಚಾರದಲ್ಲಿ ಸರಕಾರ ಮಾತನಾಡಬೇಕು. ನಾನು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಇಂತಹ ವಿಚಾರಗಳ ಬಗ್ಗೆ ಮಾತನಾಡುವ ಮುನ್ನ ಪಕ್ಷದ ಒಳಗೆ ಚರ್ಚೆ ಮಾಡಬೇಕು. ಪಕ್ಷದ ಅಭಿಪ್ರಾಯ ತೆಗೆದುಕೊಳ್ಳಬೇಕು. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರ ಅಲ್ಲ ಎಂದರು.

ಈ ವಿಚಾರದಲ್ಲಿ ನನಗೆ ಆಘಾತ ಎನಿಸಿದ್ದು, ಸಚಿವರೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅವರ ಬಳಿಯೇ ಅಧಿಕಾರ ಇದೆ. ಅವರ ಕೈಯಲ್ಲಿ ಪೆನ್ನು, ಪೇಪರ್ ಇದೆ. ಆದರೂ ಅವರು ಬೀದಿಗೆ ಯಾಕೆ ಇಳಿದಿದ್ದಾರೋ ಗೊತ್ತಾಗುತ್ತಿಲ್ಲ ಎಂದು ತಿರುಗೇಟು ನೀಡಿದರು.

ಸ್ವಾಮೀಜಿಗಳು ಹೋರಾಟ ಮಾಡುವುದರಲ್ಲಿ ಒಂದು ಅರ್ಥ ಇದೆ. ಅವರಿಗೆ ಧ್ಯೇಯ, ಉದ್ದೇಶ ಇರುತ್ತದೆ. ಆದರೆ ಮಂತ್ರಿಗಳು ಹೋರಾಟ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ.

ಸಭಾಪತಿ ಸ್ಥಾನಕ್ಕೆ ನಸೀರ್ ಅಹ್ಮದ್ ಪಕ್ಷದ ಅಭ್ಯರ್ಥಿ: ವಿಧಾನ ಪರಿಷತ್ತಿನ ಸಭಾಪತಿ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ನಸೀರ್ ಅಹ್ಮದ್ ಅವರನ್ನು ಕಣಕ್ಕಿಳಿಸುತ್ತೇವೆ. ಯಾವ ಯಾವ ಪಕ್ಷದವರು ಏನು ನಿರ್ಧಾರ ಕೈಗೊಳ್ಳುತ್ತಾರೆ ಅಂತ ಕಾದು ನೋಡೋಣ ಎಂದು ಅವರು ಪ್ರತಿಕ್ರಿಯಿಸಿದರು.

ದುರದೃಷ್ಟಕರ: ಉತ್ತರಾಖಂಡದಲ್ಲಿ ಹಿಮಪಾತದಿಂದ 150ಕ್ಕೂ ಹೆಚ್ಚು ಜನ ಕಾಣೆಯಾಗಿರುವುದು ದುರಾದೃಷ್ಟಕರ ಘಟನೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಕೆಲವು ಶವಗಳು ಸಿಕ್ಕಿರುವ ವರದಿ ಬರುತ್ತಿವೆ. ಆ ಘಟನೆಯಲ್ಲಿ ನೊಂದ ಜನರ ಜತೆ ಇಡೀ ಮಾನವ ಕುಲವೆ ನಿಲ್ಲಬೇಕು. ಭಗವಂತ ಒಳ್ಳೆಯದು ಮಾಡಲಿ, ಯಾರಿಗೂ ತೊಂದರೆಯಾಗುವುದು ಬೇಡ. ಕಾಣೆಯಾಗಿರುವವರು ಜೀವಂತವಾಗಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡೋಣ. ಕೇಂದ್ರ ಸರಕಾರ ಕೂಡಲೇ ಸೇನೆ ಬಳಸಿ ಅಲ್ಲಿನ ಜನರಿಗೆ ರಕ್ಷಣೆ ನೀಡಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X