ಕಲ್ಲಡ್ಕ: ಕಾರು ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ : ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ರವಿವಾರ ಸಂಜೆಯ ಸುಮಾರಿಗೆ ಸಂಭವಿಸಿದೆ.
ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಸವಾರನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಒಂದು ಪಾರ್ಶ್ವ ಹಾನಿಯಾಗಿದೆ. ಇಂದು ಬೆಳಗ್ಗೆಯಷ್ಟೇ ಕಲ್ಲಡ್ಕದಲ್ಲಿ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ, ಯುವಕನೋರ್ವ ಮೃತಪಟ್ಟಿದ್ದು, ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಅಪಘಾತಕ್ಕೆ ಕಲ್ಲಡ್ಕ ಸಾಕ್ಷಿಯಾಗಿದೆ.






.jpeg)

.jpeg)
.jpeg)
.jpeg)

