ಉಡುಪಿ: 12 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ, ಫೆ.7: ಜಿಲ್ಲೆಯಲ್ಲಿ ರವಿವಾರ ಒಟ್ಟು 12 ಮಂದಿಯಲ್ಲಿ ಕೋವಿಡ್- 19 ಸೋಂಕು ಪತ್ತೆಯಾಗಿದೆ. ದಿನದಲ್ಲಿ 9 ಮಂದಿ ಸೋಂಕಿನಿಂದ ಗುಣಮುಖ ರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 51ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಐವರು ಪುರುಷರು ಹಾಗೂ ಏಳು ಮಂದಿ ಮಹಿಳೆಯರು. ಇವರಲ್ಲಿ 9 ಮಂದಿ ಉಡುಪಿ, ಇಬ್ಬರು ಕುಂದಾಪುರ ಹಾಗೂ ಒಬ್ಬರು ಕಾರ್ಕಳ ತಾಲೂಕಿನವರು. ಶನಿವಾರ 9 ಮಂದಿ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ 23,157ಕ್ಕೇರಿದೆ.
990 ಮಂದಿ ನೆಗೆಟಿವ್: ಶನಿವಾರ ಜಿಲ್ಲೆಯ 1002 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 990 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 12 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,397 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,42,518 ಮಂದಿ ಕೋವಿಡ್ ಪರೀಕ್ಷೆಗೊಳ ಗಾಗಿದ್ದಾರೆ. ಇವರಲ್ಲಿ 3,19,121 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಈವರೆಗೆ ಬಲಿಯಾದವರ ಸಂಖ್ಯೆ 189 ಆಗಿದೆ.







