ಪ್ರೀತಿಸಲು ನಿರಾಕರಿಸಿದ ಯುವತಿಗೆ ಚೂರಿ ಇರಿದ ಯುವಕ: ಆರೋಪಿ ಬಂಧನ

ಬೆಂಗಳೂರು, ಫೆ.7: ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ಮನಸೋ ಇಚ್ಛೆ ಚಾಕುವಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಯುವಕನೋರ್ವನನ್ನು ನಂದಿನಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದೀಪಕ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಲಗ್ಗೆರೆ ನಿವಾಸಿಯಾಗಿರುವ ಯುವತಿಯ ತಾಯಿ ದೂರು ನೀಡಿದ ಮೇರೆಗೆ ಆರೋಪಿ ದೀಪಕ್‍ನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
21 ವರ್ಷದ ಯುವತಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಆರೋಪಿ ದೀಪಕ್, ಯುವತಿಯನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಯುವತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದಕ್ಕೆ ದೀಪಕ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ನಂದಿನಿ ಲೇಔಟ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





