Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮಕ್ಕಳ ಹಕ್ಕು ಕಾರ್ಯರೂಪಕ್ಕೆ ತರುವುದು...

‘ಮಕ್ಕಳ ಹಕ್ಕು ಕಾರ್ಯರೂಪಕ್ಕೆ ತರುವುದು ಸರ್ವರ ಕರ್ತವ್ಯ’

ವಾರ್ತಾಭಾರತಿವಾರ್ತಾಭಾರತಿ9 Feb 2021 9:35 PM IST
share
‘ಮಕ್ಕಳ ಹಕ್ಕು ಕಾರ್ಯರೂಪಕ್ಕೆ ತರುವುದು ಸರ್ವರ ಕರ್ತವ್ಯ’

ಮಂಗಳೂರು, ಫೆ.9: ಮಕ್ಕಳ ರಕ್ಷಣೆ ಸೇರಿದಂತೆ ಅವರ ಹಕ್ಕುಗಳನ್ನು ಕಾರ್ಯರೂಪಕ್ಕೆ ತರುವುದು ಸಮಾಜದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಂಕರಪ್ಪ ಡಿ. ತಿಳಿಸಿದ್ದಾರೆ.

ನಗರದ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಕಾಯ್ದೆಯ ಕುರಿತು ಮಕ್ಕಳ ಮತ್ತು ಅಭಿವೃದ್ಧಿ ಇಲಾಖಾ ಅಧಿಕಾರಿಗಳಿಗೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಿದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಮಕ್ಕಳ ಬೆಳವಣಿಗೆ, ಪಾಲನೆ, ಪೋಷಣೆಯ ಬಗ್ಗೆ ಪ್ರತಿಯೊಬ್ಬರು ಒತ್ತು ನೀಡುವುದರೊಂದಿಗೆ ಅವರಿಗೆ ಉತ್ತಮ ಶಿಕ್ಷಣ ಹಾಗೂ ಮಾರ್ಗದರ್ಶನ ನೀಡಿದಾಗ ಭವಿಷ್ಯದಲ್ಲಿ ಮಕ್ಕಳು ಉತ್ತಮ ಸತ್ಪ್ರಜೆಯಾಗಲು ಸಾಧ್ಯ. ಮಕ್ಕಳ ರಕ್ಷಣಾ ಕಾರ್ಯದಲ್ಲಿ ಪಾಲ್ಗೊಳ್ಳುವಾಗ ಅಧಿಕಾರಿಗಳು ಅನೇಕ ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆ ಸಮಯದಲ್ಲಿ ಸಾಮಾನ್ಯ ಜ್ಞಾನ ಹಾಗೂ ತಂತ್ರಗಳನ್ನು ಬಳಸಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು.

ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಾಗ ಕಾನೂನಿನ ಬಗ್ಗೆ ಸರಿಯಾದ ತಿಳುವಳಿಕೆ ಹೊಂದುವುದು ಅವಶ್ಯಕ. ಮಕ್ಕಳ ಹಕ್ಕುಗಳು ಪ್ರಸ್ತುತ ನೀತಿಗಳು ಕಾರ್ಯಗಳು ಸೇರಿದಂತೆ ಇತರ ಚಟುವಟಿಕೆಗಳು ಆಗಾಗ ಪರಿಷ್ಕರಣೆ ಆಗುತ್ತಿವೆ. ಇವುಗಳ ಬಗ್ಗೆ ಅರಿತುಕೊಳ್ಳಲು ಈ ರೀತಿಯ ಕಾರ್ಯಾಗಾರಗಳನ್ನು ನಡೆಸುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಾಪಬೋವಿ ಮಾತನಾಡಿ, ಮಕ್ಕಳು ದೌರ್ಬಲ್ಯರಾಗಿದ್ದು ಅವರ ಮೇಲೆ ಆಗುವಂತಹ ದೌರ್ಜನ್ಯಗಳು ಹಾಗೂ ಹಿಂಸೆಗಳ ಬಗ್ಗೆ ಧ್ವನಿ ಎತ್ತಲು ಮತ್ತು ಅವುಗಳ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ದೂರು ನೀಡುವ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಅವುಗಳ ಕಷ್ಟಕ್ಕೆ ನಾವು ಸ್ಪಂದಿಸಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಪೀಟರ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ರಕ್ಷಣಾ ಕಾರ್ಯದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಅವರ ರಕ್ಷಣೆಯನ್ನು ಸುಲಭವಾಗಿ ಮಾಡಲು ಸಾಧ್ಯ ಎಂದರು.

ಮಕ್ಕಳಿಗಾಗಿ ದೇಶದಲ್ಲಿ ಹಲವು ಕಾಯ್ದೆಗಳಾದ ಬಾಲ್ಯವಿವಾಹ ಕಾಯ್ದೆ, ಬಾಲಕಾರ್ಮಿಕ ನಿಯಂತ್ರಣ ಹಾಗೂ ಬಾಲಕಾರ್ಮಿಕ ನಿಷೇಧ ಕಾಯ್ದೆ, ಜುವೆನೈಲ್ ಜಸ್ಟಿಸ್ ಆಕ್ಟ್, ಪೋಕ್ಸೊ ಕಾಯ್ದೆ, ರಾಷ್ಟ್ರೀಯ ಮಕ್ಕಳ ನೀತಿ ಸೇರಿದಂತೆ ಮತ್ತಿತರ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇವುಗಳ ಸಮರ್ಪಕ ಅನುಷ್ಠಾನ ಮಾಡಲು ಜನಸಮುದಾಯವು ಪಾಲ್ಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಟ್ರೂಡ್ ವೇಗಸ್, ತಾಲೂಕುಗಳ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶೋಭಾ ಪಿ., ಹರೀಶ್ ಕೆ., ರಶ್ಮಿ, ಪ್ರಿಯಾ ಆಡ್ಮಿಸ್, ಸುಧಾ ಜೋಶಿ, ಗಾಯಿತ್ರಿ ಬಾಯಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X