ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪ.ಪೂ. ಕಾಲೇಜು ಉತ್ತಮ ಸಾಧನೆ
ಮೂಡುಬಿದಿರೆ : ಚಾರ್ಟೆರ್ಡ್ ಎಕೌಂಟಂಟ್ ಆಫ್ ಇಂಡಿಯಾವು ನವೆಂಬರ್ 2020ರಲ್ಲಿ ದೇಶವ್ಯಾಪಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮೆರೆದಿದ್ದಾರೆ.
ಈ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 60 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಈ ಪರೀಕ್ಷೆಯಲ್ಲಿ ದೇಶದ ಒಟ್ಟು ಫಲಿತಾಂಶವು 35.03% ಆಗಿದ್ದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಫಲಿತಾಂಶವು 66.66% ಪ್ರತಿಶತವಿದ್ದು ದೇಶದಲ್ಲೇ ಇದು ಅತ್ಯುನ್ನತ ಫಲಿತಾಂಶವಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಸಹಕರಿಗಳಾದ ಪ್ರಾಧ್ಯಾಪಕರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರು ಅಭಿನಂದಿಸಿದ್ದಾರೆ.
Next Story





