ಯೋಗೇಶ್ಗೌಡ ಹತ್ಯೆ ಪ್ರಕರಣ: ಸಾಕ್ಷ್ಯ ನಾಶ ಕೇಸ್ ವಿಚಾರಣೆ ಮತ್ತೆ ಮುಂದೂಡಿಕೆ

ವಿನಯ್ ಕುಲಕರ್ಣಿ
ಧಾರವಾಡ, ಫೆ.10: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷ್ಯ ನಾಶ ಕೇಸ್ ವಿಚಾರಣೆಯನ್ನು ಧಾರವಾಡದ ಜೆಎಂಎಫ್ಸಿ ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ.
ಸಿಬಿಐ ಕೇಸ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾದ ಹಿನ್ನೆಲೆ ಈ ಕೇಸ್ ಸಹ ಅದೇ ಕೋರ್ಟ್ಗೆ ವರ್ಗಾಯಿಸುವಂತೆ ವಿನಯ್ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿಕೆ ಮಾಡಿದರು.
ಸಿಬಿಐನಿಂದ ಸಾಕ್ಷ್ಯ ನಾಶದ ಪ್ರತ್ಯೇಕ ದೂರು ಸಲ್ಲಿಕೆಯಾಗಿತ್ತು. ಸಿಬಿಐ ದೂರು ಆಧರಿಸಿ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ವಿನಯ್ ಸೇರಿ 8 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು.
ವಿನಯ್ ಕುಲಕರ್ಣಿ ಪ್ರಕರಣದ ಮೊದಲ ಆರೋಪಿಯಾಗಿದ್ದು, ಯೋಗೇಶ್ ಗೌಡ ಕೊಲೆ ಬಳಿಕ ಸಾಕ್ಷ್ಯ ನಾಶ ಮಾಡುವ ಯತ್ನ ನಡೆದಿತ್ತು ಎನ್ನಲಾಗಿದೆ.
Next Story





