ಪತ್ರಕರ್ತ ಅಶೋಕ್ ಶೆಟ್ಟಿಗೆ ವಿಕಲ ಚೇತನ ಸಾಧಕ ರಾಜ್ಯ ಪ್ರಶಸ್ತಿ

ಮಂಗಳೂರು, ಫೆ.10: ಪತ್ರಕರ್ತ ಅಶೋಕ್ ಶೆಟ್ಟಿ ಬಿ.ಎನ್. ಅವರು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ನೀಡಲಾಗುವ ರಾಜ್ಯ ಪ್ರಶಸ್ತಿಗೆ (ವೈಯಕ್ತಿಕ ಪ್ರಶಸ್ತಿ) ಆಯ್ಕೆಯಾಗಿದ್ದಾರೆ.
ಈ ಬಗ್ಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಇದರ ನಿರ್ದೇಶಕ ಡಾ. ವಿ. ಮುನಿರಾಜು ಅವರು ಕಳುಹಿಸಿದ ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ. ಫೆ. 11ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ “ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ” ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





