ಜೂಜಾಟ : 7 ಮಂದಿ ಬಂಧನ
ಶಿವಮೊಗ್ಗ, ಫೆ.11 : ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಿ, 66,540 ರೂ. ನಗದು ಹಾಗೂ 7ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಡಿಎಸ್‍ಬಿ ವಿಭಾಗದ ಪೊಲೀಸ್ ನಿರೀಕ್ಷಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹಾಲಪ್ಪ, ಸತೀಶ್ ರಾಜ್, ಮಂಜುನಾಥ, ಚಂದ್ರಾನಾಯ್ಕ, ಸಮೀವುಲ್ಲಾ ಮತ್ತು ವಸಂತ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಮಾಹಿತಿ ನೀಡಿದ್ದಾರೆ.
Next Story





