Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ತ್ವರಿತ...

ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಯಡಿಯೂರಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Feb 2021 1:54 PM IST
share
ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ  ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಡವರಿಗಾಗಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ ಯೋಜನೆಗಳು. ಇವುಗಳ ಅನುಷ್ಠಾನಕ್ಕೆ ಬ್ಯಾಂಕರುಗಳು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಈ ಯೋಜನೆಗಳಡಿ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಆದ್ಯ ಗಮನ ಹರಿಸುವಂತೆ ಬ್ಯಾಂಕರುಗಳಿಗೆ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 15 ದಿನಗಳೊಳಗೆ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸಲಾಗುವುದು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಅವುಗಳನ್ನು ವಿವಿಧ ಬ್ಯಾಂಕುಗಳಿಗೆ ಕಳುಹಿಸಿ, ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಸಿ.ಎಲ್.ಎಸ್.ಎಸ್ ಯೋಜನೆಯಡಿ ರಾಜ್ಯದಲ್ಲಿ 53,695 ಅರ್ಜಿಗಳಿಗೆ ಮಾತ್ರ ಮಂಜೂರಾತಿ ದೊರೆತಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದಾಗ, ನಮ್ಮ ರಾಜ್ಯ ಹಿಂದುಳಿದಿದೆ. ಅದೇ ರೀತಿ ಪಾಲುದಾರಿಕೆಯಲ್ಲಿ ಕೈಗೆಟಕುವ ವಸತಿ ಯೋಜನೆಯಡಿ ಮಂಜೂರಾಗಿರುವ 3,46,414 ಪ್ರಕರಣಗಳ ಪೈಕಿ 1,16,168 ಪ್ರಕರಣಗಳಿಗೆ ಕಾರ್ಯಾದೇಶವನ್ನು ನೀಡಲಾಗಿದ್ದು, ಕೇವಲ 19,658 ಮನೆಗಳು ಮಾತ್ರ ಪೂರ್ಣಗೊಂಡಿವೆ. ಈ ಯೋಜನೆಯಡಿ ಬ್ಯಾಂಕಿನಿಂದ ನೀಡುವ ಸಾಲ ಪ್ರಕ್ರಿಯೆ ಪ್ರಾರಂಭವಾಗದಿರುವುದು ಯೋಜನೆಯ ಪ್ರಗತಿಗೆ ಪೂರಕವಾಗಿಲ್ಲ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಈ ವಸತಿ ಯೋಜನೆ ನಗರದ ಬಡವರಿಗೆ ಸೂರು ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರಾಜ್ಯದಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು  ಎಲ್ಲಾ ಬ್ಯಾಂಕುಗಳು ಹಾಗೂ ಅನುಷ್ಠಾನ ಸಂಸ್ಥೆಗಳು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಸಲಹೆ ನೀಡಿದರು. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020 ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆಯಾಗಲಿದೆ. ಪಿಎಂ. ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳನ್ನು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರವನ್ನೂ ನೀಡಲಾಗುವುದು. ಈವರೆಗೆ 2,24,368 ಅರ್ಜಿಗಳನ್ನು ಯೋಜನೆಯಡಿ ಸ್ವೀಕರಿಸಲಾಗಿದ್ದು, ಕೇವಲ 66,423 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ರಾಜ್ಯದ ಬ್ಯಾಂಕುಗಳು ಶೇ 30 ರಷ್ಟು ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಿವೆ. ಕೋವಿಡ್-19 ಸಾಂಕ್ರಾಮಿಕದಿಂದ ತತ್ತರಿಸಿರುವ ಬಡಜನರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದ್ದು, ಬಾಕಿ ಇರುವ ಎಲ್ಲ ಅರ್ಜಿಗಳನ್ನು ಬ್ಯಾಂಕುಗಳು ಅತಿ ಶೀಘ್ರವಾಗಿ ಮಂಜೂರಾತಿ ನೀಡಿ ವಿಲೇವಾರಿ ಮಾಡಬೇಕೆಂದು ಸಿಎಂ ಸೂಚಿಸಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ವಿವಿಧ ನಗರಗಳಲ್ಲಿ ಸಾಲ ಮಂಜೂರಾದರೂ ವಿತರಣೆಯಾಗದಿರುವ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ನಿಗದಿಪಡಿಸಿ, ಸಾಲ ವಿತರಣೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ವಸತಿ ಸಚಿವ ವಿ. ಸೋಮಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ  ವಂದಿತಾ ಶರ್ಮ, ಕೆನರಾ ಬ್ಯಾಂಕ್‍ನ ಕಾರ್ಯನಿರ್ವಾಹಕ ನಿರ್ದೇಶಕರಾದ ಎ. ಮಣಿಮೇಖಲೈ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜೋಸ್ ಜೆ ಕಟ್ಟೂರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X