ಪಡಿತರ ಚೀಟಿಗಾಗಿ ಅನ್‍ಲೈನ್ ಮೂಲಕ ಅರ್ಜಿ ಸ್ವೀಕಾರ ಪುನರ್ ಆರಂಭ

ಬೆಂಗಳೂರು, ಫೆ. 11: ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಸೇವೆಯನ್ನು ಪುನರ್ ಆರಂಭಿಸುವ ಬಗ್ಗೆ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಥಗಿತಗೊಳಿಸಿದ್ದ ಹೊಸ ಪಡಿತರ ಚೀಟಿಗಳ ಆನ್‍ಲೈನ್ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮತ್ತೆ ಪ್ರಾರಂಭಿಸಲು ಆದೇಶಿಸಲಾಗಿದೆ.
ಸಾರ್ವಜನಿಕರು ಹೊಸ ಆದ್ಯತಾ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗಾಗಿ ಈಗಾಗಲೇ ನಿಗದಿಪಡಿಸಿದ ಮಾನದಂಡಗಳಂತೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





