Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ...

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಪೋಕ್ಸೊ ಪ್ರಕರಣ: ಜನವರಿ ತಿಂಗಳಲ್ಲೇ 8 ಅತ್ಯಾಚಾರ ಪ್ರಕರಣಗಳು ವರದಿ

ವಾರ್ತಾಭಾರತಿವಾರ್ತಾಭಾರತಿ11 Feb 2021 10:00 PM IST
share
ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಪೋಕ್ಸೊ ಪ್ರಕರಣ: ಜನವರಿ ತಿಂಗಳಲ್ಲೇ 8 ಅತ್ಯಾಚಾರ ಪ್ರಕರಣಗಳು ವರದಿ

ಚಿಕ್ಕಮಗಳೂರು, ಫೆ.11: ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕಾಫಿನಾಡಿನಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ವಿಕೃತ ಮನಸ್ಸಿನವರಿಂದಾಗಿ ಜಿಲ್ಲೆಯ ಮಾನ ರಾಜ್ಯ ಮಟ್ಟದಲ್ಲಿ ಹರಾಜಾಗುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹಾಗೂ 2021ರ ಜನವರಿ ಒಂದೇ ತಿಂಗಳಲ್ಲಿ ವರದಿಯಾದ ಪೋಕ್ಸೊ ಪ್ರಕರಣಗಳ ಸಂಖ್ಯೆ ಕಾಫಿನಾಡಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿ ಹೇಳುತ್ತಿವೆ.

ಕಾಫಿನಾಡು ಅತ್ಯಂತ ಸುಸಂಸ್ಕೃತ ಜಿಲ್ಲೆ ಎಂದು ರಾಜ್ಯ ಮಟ್ಟದಲ್ಲಿ ಹೆಸರುಗಳಿಸಿ, ಖ್ಯಾತಿ ಪಡೆದುಕೊಂಡಿದೆ. ಇಲ್ಲಿನ ಜನರು ವಿದ್ಯಾವಂತರು ಹಾಗೂ ಪ್ರಜ್ಞಾವಂತರು, ಸುಸಂಸ್ಕೃತರು ಎಂಬ ಭಾವನೆ ಹೊರ ಜಗತ್ತಿನದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಂದಾಗಿ ಕಾಫಿನಾಡಿನ ಜನರು ಆತಂಕಪಡುವಂತಾಗಿದೆ. ಜಿಲ್ಲೆಯಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಅತೀ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಬಹುತೇಕ ಅತ್ಯಾಚಾರ ಪ್ರಕರಣಗಳು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ನಡೆದಿರುವುದು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಂಕಿ ಅಂಶಗಳಿಂದ ತಿಳಿದುಬರುತ್ತಿವೆ. ಇದೇ ವೇಳೆ ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ 90 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿರುವುದು ಆತಂಕದ ಸಂಗತಿಯಾಗಿದೆ. ಈ ವಿವಾಹ ಪ್ರಕರಣ ಪೈಕಿ ಬಹುತೇಕ ಪ್ರಕರಣಗಳು ಲಾಕ್‍ಡೌನ್ ಅವಧಿಯಲ್ಲೇ ವರದಿಯಾಗಿರುವುದು ವಿಪರ್ಯಾಸ.

ಜಿಲ್ಲೆಯಲ್ಲಿ 2020ರ ಸಾಲಿನಲ್ಲಿ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪೋಕ್ಸೊ ಕಾಯ್ದೆಯಡಿಯಲ್ಲಿ 70 ಪ್ರಕರಣ ದಾಖಲಾಗಿವೆ. ಈ ಪೈಕಿ ಚಿಕ್ಕಮಗಳೂರು ಉಪವಿಭಾಗದಲ್ಲಿ 30, ತರೀಕೆರೆ ಉಪವಿಭಾಗದಲ್ಲಿ 31, ಕೊಪ್ಪ ಉಪವಿಭಾಗದಲ್ಲಿ 9 ಪೋಕ್ಸೊ ಪ್ರಕರಣಗಳು ದಾಖಲಾಗಿವೆ. ಇನ್ನು 2021ನೇ ಸಾಲಿನಲ್ಲಿ ಜನವರಿ ತಿಂಗಳೊಂದರಲ್ಲೇ 8 ಅತ್ಯಾಚಾರ ಪ್ರಕರಣಗಳು ವರದಿಯಾಗಿರುವುದು ಜನತೆ ಬೆಚ್ಚಿ ಬೀಳುವ ವಿಚಾರವಾಗಿದೆ.

ಶೃಂಗೇರಿ ತಾಲೂಕಿನಲ್ಲಿ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಘಟನೆಯ ಬಳಿಕ ಜಿಲ್ಲೆಯಲ್ಲಿ ಮತ್ತೆ ಮೂರು ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಲಾಕ್‍ಡೌನ್ ಅವಧಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳೂ ಇದೀಗ ಬಟಾ ಬಯಲಾಗುತ್ತಿವೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಎರಡು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿದೆ. ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಕೃತ್ಯ ನಡೆಸಿರುವುದು ಬೆಳೆಕಿಗೆ ಬಂದಿದೆ. ಈ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. 

ಬಾಳೂರು ಹಾಗೂ ಮಲ್ಲಂದೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣಗಳು ಬೆಳಕಿಗೆ ಬಂದಿರುವುದು ಬಾಲಕಿಯರು ಗರ್ಭಿಣಿಯಾಗಿ ಸಮಾರು 7-8 ತಿಂಗಳು ಕಳೆದ ಬಳಿಕ. ಅಂದರೆ ಈ ಬಾಲಕಿಯರ ಮೇಲೆ ಲಾಕ್‍ಡೌನ್ ಅವಧಿಯಲ್ಲೇ ಲೈಂಗಿಕ ದೌರ್ಜನ್ಯ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಅತ್ಯಾಚಾರ ಕೃತ್ಯ ಎಸಗಲಾಗಿದ್ದು, ಜಿಲ್ಲೆಯ ಮಲೆನಾಡು ಭಾಗದ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಬಡ ಕುಟುಂಬದ ಹೆಣ್ಣು ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬರುತ್ತಿದೆ. ಇನ್ನು ಜಿಲ್ಲೆಯಲ್ಲಿ 2020ನೇ ಸಾಲಿನಲ್ಲಿ 90 ಬಾಲ್ಯವಿವಾಹ ಪ್ರಕರಣ ವರದಿಯಾಗಿದ್ದು, ಈ ಪೈಕಿ 14 ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಾಗಿದೆ. ಬಾಲ್ಯ ವಿವಾಹಕ್ಕೂ ಪೋಷಕರು ಈ ಲಾಕ್‍ಡೌನ್ ಸಂದರ್ಭವನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿಪ್ರಾಯವಾಗಿದೆ.

ಲಾಕ್‍ಡೌನ್ ಸಂದರ್ಭದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ಪೋಷಕರಿಗೆ ಹೆಣ್ಣು ಮಕ್ಕಳ ಚಿಂತೆ ಇದ್ದು, ಶಾಲಾ ಕಾಲೇಜು ಮುಚ್ಚಿದ್ದರಿಂದ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾದ ಕೆಲ ಪೋಷಕರು ಶಾಲಾ ಕಾಲೇಜು ಮತ್ತೆ ತೆರೆಯುತ್ತದೋ ಇಲ್ಲವೋ ಎಂಬ ಭೀತಿಯಲ್ಲಿ ಹೆಣ್ಣು ಮಕ್ಕಳಿಗೆ ವಿವಾಹದ ವಯಸ್ಸು ತುಂಬುವುದಕ್ಕೂ ಮುನ್ನ ವಿವಾಹ ಮಾಡಲು ಮುಂದಾಗಿದ್ದಾರೆ. ಲಾಕ್‍ಡೌನ್ ಅವಧಿಯಲ್ಲೇ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿವೆ. ಕೊರೋನ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಿದ ಲಾಕ್‍ಡೌನ್ ಸಮಸ್ಯೆಗೆ ಕಾರಣವಾಗಿರುವುದು ಮಾತ್ರವಲ್ಲದೇ ಸಾಮಾಜಿಕ ಸಮಸ್ಯೆಗಳನ್ನೂ ಯಥೇಚ್ಛವಾಗಿ ತಂದೊಡ್ಡಿದೆ ಎಂದು ಇಲಾಖಾಧಿಕಾರಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X