ಕೊರೋನ: 12,000 ಹೊಸ ಪ್ರಕರಣ ದಾಖಲು

ಹೊಸದಿಲ್ಲಿ, ಫೆ.11: ಗುರುವಾರ ಬೆಳಗ್ಗಿನವರೆಗಿನ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೊರೋನ ಸೋಂಕಿನ 12,000 ಹೊಸ ಪ್ರಕರಣ ದಾಖಲಾಗಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 108 ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೇಳಿದೆ.
ದೇಶದಲ್ಲಿ ಕೊರೋನ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 1,08,71,294 ಆಗಿದ್ದು ಇದರಲ್ಲಿ 1,05,73,372 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,42,562. ಕೊರೋನದಿಂದ 1,55,360 ಮಂದಿ ಮರಣ ಹೊಂದಿದ್ದಾರೆ. ಗುರುವಾರದವರೆಗೆ ಒಟ್ಟು 70,17,114 ಮಂದಿಗೆ ಕೊರೋನ ಲಸಿಕೆ ನೀಡಲಾಗಿದ್ದು 20,40,23,840 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
Next Story





