Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಟುಂಬದಿಂದ ತ್ಯಜಿಸಲ್ಪಟ್ಟ ಕೇರಳದ ಬಾಲನ್...

ಕುಟುಂಬದಿಂದ ತ್ಯಜಿಸಲ್ಪಟ್ಟ ಕೇರಳದ ಬಾಲನ್ ರನ್ನು ಮತ್ತೆ ಕುಟುಂಬದೊಂದಿಗೆ ಒಂದುಗೂಡಿಸಿದ ಟೀಮ್ ಬಿ ಹ್ಯೂಮನ್

ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ11 Feb 2021 10:57 PM IST
share
ಕುಟುಂಬದಿಂದ ತ್ಯಜಿಸಲ್ಪಟ್ಟ ಕೇರಳದ ಬಾಲನ್ ರನ್ನು ಮತ್ತೆ ಕುಟುಂಬದೊಂದಿಗೆ ಒಂದುಗೂಡಿಸಿದ ಟೀಮ್ ಬಿ ಹ್ಯೂಮನ್

ಮಂಗಳೂರು : ಕುಟುಂಬದಿಂದ ತ್ಯಜಿಸಲ್ಪಟ್ಟು, ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ 69 ವರ್ಷದ ಕೇರಳದ ಬಾಲನ್ ಅವರನ್ನು 'ಟೀಮ್ ಬಿ ಹ್ಯೂಮನ್' ಮತ್ತೆ ಕುಟುಂಬದೊಂದಿಗೆ ಒಂದುಗೂಡಿಸಿದ ಘಟನೆ ನಡೆದಿದೆ.

ಪಯ್ಯನ್ನೂರು ಕಾವಂಚಲ್ ಎಂಬಲ್ಲಿನ 69 ವರ್ಷ ಪ್ರಾಯದ ದಿನ ಕೂಲಿ ಕಾರ್ಮಿಕ ಬಾಲನ್ ಅವರ ಕಥೆ. ಬಾಲನ್ ತನ್ನ ಪತ್ನಿ ಪಾರ್ವತಿ ಮತ್ತು ಪುತ್ರಿ ಶೀಬಾ ಅವರ ಜೊತೆಗೆ ಜೀವಿಸುತ್ತಿದ್ದರು. ಒಂದು ದಿನ ತನ್ನ ಕುಟುಂಬದೊಂದಿಗೆ ಜಗಳ ಮಾಡಿ ಬಾಲನ್ ಕೇರಳದಿಂದ ಮಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದರು. ಅದು ಕೊರೋನದ ಲಾಕ್ ಡೌನ್  ಸಮಯ. ಮಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಬಾಲನ್ ರಿಗೆ ಊರಿಗೆ ಹಿಂತಿರುಗಲು ವಾಹನದ ವ್ಯವಸ್ಥೆ ಇರಲಿಲ್ಲ ಮತ್ತು ಖರ್ಚಿಗೆ ಕೈಯಲ್ಲಿ ಹಣವೂ ಇರಲಿಲ್ಲ. ಹೀಗಿರುವಾಗ ಒಂದು ದಿನ ಬಾಲನ್ ರಸ್ತೆ ಕ್ರಾಸ್  ಮಾಡುತ್ತಿರುವ ಸಂದರ್ಭ ಅಪಘಾತಕ್ಕೊಳಗಾಗಿ ಕಾಲನ್ನು ಕಳೆದುಕೊಂಡರು. ಶಸ್ತ್ರ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಅವರು ಹಂಪನ್ ಕಟ್ಟೆಯ ಮಸ್ಜಿದುನ್ನೂರ್ ಸಮೀಪದ ಫುಟ್ ಪಾತಲ್ಲಿ ಆಶ್ರಯ ಪಡೆಯುತ್ತಿದ್ದರು.

ಇವರ ಅಸಹಾಯಕ ಪರಿಸ್ಥಿತಿಯನ್ನು ಕಂಡ ಮಸ್ಜಿದುನ್ನೂರ್ ಖತೀಬ್ ಪ್ರತಿದಿನ ಅವರಿಗೆ ಆಹಾರವನ್ನು ನೀಡುತ್ತಿದ್ದರು. ಅವರ ಈ ದಾರುಣ ಸ್ಥಿತಿಯನ್ನು 'ಟೀಮ್ ಬಿ ಹ್ಯೂಮನ್' ಗೆ ತಿಳಿಸುತ್ತಾರೆ. ತಕ್ಷಣ ಸ್ಪಂದಿಸಿದ ಟೀಮ್ ಬಿ ಹ್ಯೂಮನ್  ಬಾಲನ್ ರನ್ನು ಅವರ ಆಶ್ರಯ ಕೇಂದ್ರಕ್ಕೆ  ವರ್ಗಾಯಿಸಿ ಎಲ್ಲಾ ಅಗತ್ಯ ಆರೈಕೆಗಳನ್ನು ಮಾಡುತ್ತಾರೆ. ಬಾಲನ್ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡುತ್ತಾರೆ.

ಮೊದಲಿಗೆ ಕುಟುಂಬದವರು ಬಾಲನ್ ರನ್ನು ಸ್ವೀಕರಿಸಲು ನಿರಾಕರಿಸಿದರು ಎನ್ನಲಾಗಿದ್ದು, ನಂತರ ಟೀಮ್ ಬಿ ಹ್ಯೂಮನ್ ಅಲ್ಲಿಯ ಪೊಲೀಸ್ ಇನ್ಸ್ ಪೆಕ್ಟರನ್ನು ಮತ್ತು ನೆರೆಕರೆಯವರನ್ನು ಕಂಡು ಬಾಲನ್ ಮನೆಯವರಿಗೆ ಮನವರಿಕೆ ಮಾಡಿಸುವಂತೆ ವಿನಂತಿಸುತ್ತಾರೆ. ಈ ಎಲ್ಲಾ ಪ್ರಯತ್ನಗಳ ಫಲಶೃತಿಯಾಗಿ ಒಂದು ತಿಂಗಳ ನಂತರ  ಬಾಲನ್ ಕುಟುಂಬ ಅವರನ್ನು ಸ್ವೀಕರಿಸಲು ಒಪ್ಪಿಕೊಳ್ಳುತ್ತದೆ. ಕೊನೆಗೂ ಬಾಲನ್  ತಮ್ಮ ಕುಟುಂಬವನ್ನು ಸೇರಿಕೊಂಡರು. ಇಂದರಿಂದ ಟೀಮ್ ಬಿ ಹ್ಯೂಮನ್ ನ ಪ್ರಯತ್ನ ಸಾರ್ಥಕವಾಯಿತು

ಟೀಮ್ ಬಿ ಹ್ಯೂಮನ್ : https://b-human.in, https://www.facebook.com/B.Human88

Contact: +91 9880232388, +91 9880012388, phonepe / BHIM: 9880232388, GOOGLEPAY/PAYTM/WhatsAppPAY: 9880232388@YBL
B HUMAN
AC.No-510101006627935
BANK: UNION BANK OF INDIA
IFSC: UBIN0900788
BRANCH: KANKANADY, MANGALORE 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X