Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಘನತೆ ಕಾಪಾಡಲು ಹಗಲಿರುಳು...

ವಿಧಾನಪರಿಷತ್ ಘನತೆ ಕಾಪಾಡಲು ಹಗಲಿರುಳು ಶ್ರಮಿಸುತ್ತೇನೆ: ಸಭಾಪತಿ ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ12 Feb 2021 6:32 PM IST
share
ವಿಧಾನಪರಿಷತ್ ಘನತೆ ಕಾಪಾಡಲು ಹಗಲಿರುಳು ಶ್ರಮಿಸುತ್ತೇನೆ: ಸಭಾಪತಿ ಬಸವರಾಜ ಹೊರಟ್ಟಿ

ತುಮಕೂರು, ಫೆ.12: ಕರ್ನಾಟಕ ವಿಧಾನ ಪರಿಷತ್‍ನ ಘನತೆ, ಗೌರವವನ್ನು ಎತ್ತಿ ಹಿಡಿದು ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡಲು ಹಗಲಿರುಳು ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 113 ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ವಿಧಾನ ಪರಿಷತ್ ಇಡೀ ದೇಶಕ್ಕೆ ಮಾದರಿಯಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾವು ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.

ಸಭಾಪತಿ ಹುದ್ದೆ ಸಂವಿಧಾನ ಬದ್ಧವಾದ, ಜವಾಬ್ದಾರಿಯುತ ಸ್ಥಾನ. ಇಂತಹ ಸಂವಿಧಾನ ಬದ್ದವಾದ ಹುದ್ದೆಯನ್ನು ನಾನು ಅಲಂಕರಿಸಿದ್ದೇನೆ. ಸದನವನ್ನು ಉತ್ತಮ ರೀತಿಯಲ್ಲಿ ನಡೆಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಭಾಪತಿ ಸ್ಥಾನ ಸಂವಿಧಾನ ಬದ್ಧವಾದ ಹುದ್ದೆಯಾಗಿರುವುದರಿಂದ ಇದರಲ್ಲಿ ಯಾವುದೇ ರೀತಿಯ ಲಾಭ, ನಷ್ಟದ ವಿಚಾರ ಮಾಡುವಂತಿಲ್ಲ. ವಿಧಾನ ಪರಿಷತ್ ನಡೆಸಲು ನನಗೆ ಬಹಳ ಪ್ರೀತಿ ಮತ್ತು ಗೌರವ ಇದೆ. ಈ ವ್ಯವಸ್ಥೆಯಲ್ಲಿ ಸಮಾಜಕ್ಕೆ ದೊಡ್ಡದಾದ ಕೊಡುಗೆಯನ್ನು ಕೊಡಲು ಅವಕಾಶ ಇದೆ. ಹಾಗಾಗಿ ಆ ಕೆಲಸವನ್ನು ನಾನು ಬಹಳ ಪ್ರೀತಿ, ಶ್ರದ್ಧೆಯಿಂದ ಮಾಡುತ್ತೇವೆ ಎಂದು ಅವರು ಹೇಳಿದರು. 

ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಮಠಕ್ಕೆ ಬಂದು ಹೋಗುವ ಪರಂಪರೆ ರೂಢಿಸಿಕೊಂಡಿದ್ದೇನೆ. 2004, 2006 ಹೀಗೆ ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳು ಸೇರಿದಂತೆ ಎಲ್ಲರ ಆಶೀರ್ವಾದ ಪಡೆದಿದ್ದೇನೆ. ಈಗಲೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇನೆ. ಪ್ರಸ್ತುತ ದಿನಗಳಲ್ಲಿ ಮೀಸಲಾತಿ ಬಗ್ಗೆ ಮಾತನಾಡುವುದು ಬಹಳ ಕಷ್ಟದ ಕೆಲಸ. ಯಾರ್ಯಾರಿಗೆ ಏನೇನು ಸೌಲಭ್ಯ ಕೊಡಬೇಕು ಎಂಬ ಬಗ್ಗೆ ಸರಕಾರ ವಿಚಾರ ಮಾಡುತ್ತದೆ. ನಾವು ಜಾತ್ಯಾತೀತ ರಾಷ್ಟ್ರದಲ್ಲಿದ್ದೇವೆ. ಪ್ರತಿಯೊಬ್ಬರೂ, ರಾಜಕೀಯ ಪಕ್ಷಗಳು, ರಾಜಕಾರಣಿಗಳು ಚುನಾವಣೆಗೆ ನಿಲ್ಲಬೇಕಾದರೆ ಜಾತಿ ಪದ್ದತಿ ಮುಂದಿಟ್ಟುಕೊಳ್ಳುತ್ತಾರೆ. ಇದು ಒಳ್ಳೆಯ ಪದ್ದತಿಯಲ್ಲ. ಆದರೆ ನಿಸರ್ಗ ನಿಯಮಗಳು ಬದಲಾವಣೆಯಾದಂತೆ ನಾವುಗಳು ಸಹ ಬದಲಾವಣೆಯಾಗಬೇಕಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು. 

2ಎ ಮೀಸಲಾತಿಗಾಗಿ ಶ್ರೀಗಳು ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ನಾನು ಮಾತನಾಡುವುದಿಲ್ಲ. ಶ್ರೀಗಳು ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವಂತಹವರು. ಅವರ ಹೋರಾಟಕ್ಕೆ ದೇವರು ಒಳ್ಳೆಯದು ಮಾಡಲಿ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆಗಳಿಗೆ ಔಷಧಿ ಇಲ್ಲ. ನಾನು ಆ ಬಗ್ಗೆ ಮಾತನಾಡುವುದಿಲ್ಲ. ನಾವೆಲ್ಲರೂ ದೇಶ, ರಾಜ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವತ್ತ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.  

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ, ವಸಂತ ಹೊರಟ್ಟಿ, ಆರ್. ಶಿವಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ. ಆಂಜಿನಪ್ಪ, ಮುಖಂಡರಾದ ಟಿ.ಆರ್.ನಾಗರಾಜು, ಬೆಳ್ಳಿ ಲೋಕೇಶ್, ಪಾಲಿಕೆ ಸದಸ್ಯ ಧರಣೇಂದ್ರಕುಮಾರ್, ಗಂಗಹನುಮಯ್ಯ, ಗಂಗಣ್ಣ, ದೇವರಾಜು, ಗಣೇಶ್,ಉಪ್ಪಾರಹಳ್ಳಿ ಕುಮಾರ್, ತನ್ವೀರ್, ಲೋಕೇಶ್, ಆಶಾಜಾನು, ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X