Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ 2...

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ 2 ವರ್ಷಕ್ಕೆ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ12 Feb 2021 9:25 PM IST
share
ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ 2 ವರ್ಷಕ್ಕೆ ಹೆಚ್ಚಳ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಫೆ. 12: ‘ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ಹೆಚ್ಚಳ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮೇಳನದ ಬಳಿಕ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸಂಬಂಧ ಪೊಲೀಸ್ ಮಂಡಳಿಯನ್ನು ರಚನೆ ಮಾಡಲಾಗಿದೆ. ಈ ಮಧ್ಯೆ ಹಿಂದಿನ ಸರಕಾರ ಅಧಿಕಾರಿಗಳ ವರ್ಗಾವಣೆಯನ್ನು ಎರಡು ವರ್ಷಗಳಿಂದ ಒಂದು ವರ್ಷಕ್ಕೆ ಇಳಿಕೆ ಮಾಡಿತ್ತು. ಇದೀಗ ನಮ್ಮ ಸರಕಾರ ಅದನ್ನು ಪುನಃ ಎರಡು ವರ್ಷಕ್ಕೆ ಹೆಚ್ಚಳ ಮಾಡಲು ಉದ್ದೇಶಿಸಿದೆ. ಈ ಬಗ್ಗೆ ಶೀಘ್ರದಲ್ಲೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದರು.

ನಿಷೇಧಕ್ಕೆ ಚಿಂತನೆ: ರಾಜ್ಯದಲ್ಲಿ ಆನ್‍ಲೈನ್ ಗೇಮ್ಸ್ ಗಳನ್ನು ನಿಷೇಧ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಈ ಸಂಬಂಧ ಈಗಾಗಲೇ ಕರಡು ಸಿದ್ಧಪಡಿಸಿದ್ದು, ಶೀಘ್ರದಲ್ಲೆ ಕಾನೂನು ರೂಪಿಸಲು ಸರಕಾರ ಉದ್ದೇಶಿಸಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಆನ್‍ಲೈನ್ ಗೇಮ್ಸ್ ಗಳಿಂದ ವಂಚನೆ ಪ್ರಕರಣಗಳು ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳು ಆನ್‍ಲೈನ್ ಗೇಮ್ಸ್ ನಲ್ಲಿ ಹೆಚ್ಚಾಗಿ ತೊಡಗಿಕೊಳ್ಳುತ್ತಿದ್ದಾರೆ. ಇದು ಅವರ ಶೈಕ್ಷಣಿಕ ಪ್ರಗತಿಯ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಅಲ್ಲದೆ ಆನ್‍ಲೈನ್ ಗೇಮ್ಸ್ ಗಳ ಮೂಲಕ ಜೂಜಾಟವೂ ನಡೆಯುತ್ತಿದೆ. ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿರುವ ಕಾನೂನುಗಳನ್ನು ಅಧ್ಯಯನ ನಡೆಸಿದ್ದು, ಆ ರಾಜ್ಯಗಳಲ್ಲಿ ಕೆಲ ಗೇಮ್ಸ್ ಗಳಿಗೆ ಅನುಮತಿ ನೀಡಲಾಗಿದೆ. ಹೀಗಾಗಿ ಕಾನೂನು ಇಲಾಖೆಯ ಮೂಲಕ ಪರಿಶೀಲನೆ ನಡೆಸಿದ ಬಳಿಕ ಆನ್‍ಲೈನ್ ಗೇಮ್‍ಗಳ ನಿಷೇಧಕ್ಕೆ ಸೂಕ್ತ ಕ್ರಮ ವಹಿಸಲು ಉದ್ದೇಶಿಸಲಾಗಿದೆ ಎಂದರು.

‘ಕಾರಾಗೃಹದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡಿದ್ದು, ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಸರಿಪಡಿಸಲಾಗಿದೆ'

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X