ಉಡುಪಿ: ಅನರ್ಹರ ಪಡಿತರ ಚೀಟಿ ರದ್ದು
ಉಡುಪಿ, ಫೆ.12: ಅನ್ನಬಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಆದ್ಯತಾ (ಬಿಪಿಎಲ್) ಕಾರ್ಡ್‌ನ್ನು ಆರ್ಥಿಕವಾಗಿ ಸದೃಢವಾದ ಕೆಲವು ಕುಟುಂಬಗಳು ಬಿಪಿಎಲ್ ಕಾರ್ಡ್ ಮಾನದಂಡವನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಪಡೆದು ಕೊಂಡಿರುವುದು ಕಂಡು ಬಂದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆ ಹಚ್ಚಿ ರದ್ದುಪಡಿಸುವ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿದೆ.
ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್‌ನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಅಂತಹ ಅನರ್ಹ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿ, ಅಂತಹವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





