ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ
ಕುಂದಾಪುರ, ಫೆ.12: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಫೆ.12ರಂದು ನಸುಕಿನ ವೇಳೆ ತ್ರಾಸಿ ಮರವಂತೆ ಸಮುದ್ರ ಕಿನಾರೆ ಸಮೀಪ ಬಂಧಿಸಿದ್ದಾರೆ.ಹಾಸನದ ನಜರುಲ್ಲಾ(43) ಹಾಗೂ ಮೈಸೂರು ಮೂಲದ ರಾಘವೇಂದ್ರ (25) ಬಂಧಿತ ಆರೋಪಿಗಳು. ಇವರಿಂದ ಲಾರಿ ಹಾಗೂ ಅದರಲ್ಲಿದ್ದ 18 ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಎರಡು ಜಾನುವಾರು ಮೃತಪಟ್ಟಿದೆ ಎನ್ನಲಾಗಿದೆ.
ಮಹಾರಾಷ್ಟ್ರದ ಸೊಲ್ಲಾಪುರದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತದ ತಂಡ ಈ ಕಾರ್ಯಾಚರಣೆ ನಡೆಸಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





