Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ವರಿಗೂ ಸಮಾನತೆ ನೀಡುವ ಕೇಂದ್ರ ಬಜೆಟ್:...

ಸರ್ವರಿಗೂ ಸಮಾನತೆ ನೀಡುವ ಕೇಂದ್ರ ಬಜೆಟ್: ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ13 Feb 2021 11:12 PM IST
share
ಸರ್ವರಿಗೂ ಸಮಾನತೆ ನೀಡುವ ಕೇಂದ್ರ ಬಜೆಟ್: ಸಚಿವ ವಿ.ಸೋಮಣ್ಣ

ಬೆಂಗಳೂರು, ಫೆ.13: ಸರ್ವರಿಗೂ ಸಮಾನತೆ ದೊರಕಿಸಿಕೊಡುವ ದೂರದೃಷ್ಟಿಯ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದರಿಂದ ದೇಶದ ಅಭಿವೃದ್ಧಿ ಖಚಿತ ಎಂದು ವಸತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.

ಶನಿವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಕೇಂದ್ರ ಬಜೆಟ್ 2021ರ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್‍ನಡಿ ಕರ್ನಾಟಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ಕೊಡಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿಯೂ ಆಗಲಿದೆ ಎಂದರು.

33 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, 1,197 ಕಿ.ಮೀ.ಗೆ ಸಂಬಂಧಿಸಿ 10,904 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. 2021-22ರಲ್ಲಿ ಕರ್ನಾಟಕದಲ್ಲಿ 1,16,144 ಕೋಟಿ ರೂಪಾಯಿಯ ಮೂಲ ಸೌಕರ್ಯ ವ್ಯವಸ್ಥೆ ನಿರ್ಮಾಣಗೊಳ್ಳಲಿದೆ. ಎರಡನೇ ಹಂತದ ಬೆಂಗಳೂರು ಮೆಟ್ರೋ ನಿರ್ಮಾಣ ಕಾಮಗಾರಿಗೆ 14,788 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ಉಪನಗರ ಯೋಜನೆಗೆ 23,093 ಕೋಟಿ ರೂಪಾಯಿ, ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 4,870 ಕೋಟಿ ರೂಪಾಯಿ ಅನುದಾನ, ತುಮಕೂರು ವಸಂತ ನರಸಾಪುರದಲ್ಲಿ ಕೈಗಾರಿಕಾ ಕಾರಿಡಾರ್ (ಸಣ್ಣಸಣ್ಣ ಕೇಂದ್ರಗಳ) ನಿರ್ಮಾಣಕ್ಕೆ 7,725 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರಿಂದ 2.8 ಲಕ್ಷ ಉದ್ಯೋಗಾವಕಾಶ ಲಭಿಸಲಿದೆ ಎಂದು ಸೋಮಣ್ಣ ವಿವರಿಸಿದರು.

ಅಮೆರಿಕದ ಸಂಸ್ಥೆಯಾದ ಟೆಸ್ಲಾವು ಎಲೆಕ್ಟ್ರಿಕಲ್ ಕಾರು ಉತ್ಪಾದನಾ ಘಟಕವನ್ನು ಕರ್ನಾಟಕದಲ್ಲಿ ತೆರೆಯಲಿದೆ. ಕೊಚ್ಚಿ-ಮಂಗಳೂರು ಗ್ಯಾಸ್ ಪೈಪ್‍ಲೈನ್ ಈಗಾಗಲೇ ಲೋಕಾರ್ಪಣೆಯಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ 21,000 ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿ ನಿರ್ಮಾಣದ ಯೋಜನೆಗೆ ಒಪ್ಪಿಗೆ ಸಿಕ್ಕಿದೆ ಎಂದು ಅವರು ಹೇಳಿದರು.

ಬೆಂಗಳೂರು-ಮಂಗಳೂರಿಗೆ ಸಂಪರ್ಕ ಕೊಂಡಿಯಾಗಿರುವ ಶಿರಾಡಿಯ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಒಟ್ಟು 13 ಕಿ.ಮೀ ಉದ್ದದ 6 ಸುರಂಗ ಮಾರ್ಗ, 1.5 ಕಿ.ಮೀ ಉದ್ದದ 10 ಸೇತುವೆಗಳು ವೆಚ್ಚ 10,000 ಕೋಟಿಯಲ್ಲಿ ನಿರ್ಮಾಣವಾಗಲಿವೆ ಎಂದು ಸೋಮಣ್ಣ ತಿಳಿಸಿದರು.

ರೈತರ ಕಲ್ಯಾಣಕ್ಕೆ ಬದ್ಧವಾದ ಬಜೆಟ್ ಇದಾಗಿದೆ. 16.5 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆಯ ಗುರಿ ಇದೆ. ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಧಿ 40,000 ಕೋಟಿ ರೂ.ಗೆ ಏರಿಕೆಯಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಗಳಿಗೆ ಅನುದಾನ ಇಮ್ಮಡಿಯಾಗಿದ್ದು, 10,000 ಕೋಟಿ ರೂ. ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಶೀಘ್ರ ಹಾಳಾಗುವ ಹಣ್ಣು, ತರಕಾರಿಯಂತಹ ಹೆಚ್ಚುವರಿ 22 ಕೃಷಿ ಉತ್ಪನ್ನಗಳು “ಆಪರೇಷನ್ ಗ್ರೀನ್ ಯೋಜನೆ” ವ್ಯಾಪ್ತಿಗೆ ಬರಲಿವೆ. 1,000 ಎಪಿಎಂಸಿ ಮಾರುಕಟ್ಟೆಗಳನ್ನು ಎಲೆಕ್ಟ್ರಾನಿಕ್ ರಾಷ್ಟ್ರೀಯ ಮಾರುಕಟ್ಟೆ ವ್ಯವಸ್ಥೆಗೆ ಸಂಯೋಜಿಸಲು ಅನುಮತಿ ನೀಡಲಾಗಿದೆ. ನರೇಗಾ ಯೋಜನೆಗೆ 73,000 ಕೋಟಿ ರೂ. ನೀಡಿ ಗ್ರಾಮೀಣ ಜನರ ವಲಸೆ ತಡೆಯಲು ಸರಕಾರ ಮುಂದಾಗಿದೆ ಎಂದು ಸೋಮಣ್ಣ ತಿಳಿಸಿದರು.

ಗುತ್ತಿಗೆ ಕಾರ್ಮಿಕರು ಮತ್ತು ಇತರ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಸೌಲಭ್ಯದ ವಿಸ್ತರಣೆ ಮಾಡಲಾಗುತ್ತಿದೆ. ಆರೋಗ್ಯ ಮತ್ತು ಯೋಗಕ್ಷೇಮಕ್ಕೆ 2,23,846 ಕೋಟಿ ರೂ. ಹಂಚಿಕೆ ಮಾಡಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಇದು ಶೇ. 137ರಷ್ಟು ಏರಿಕೆಯಾಗಿದೆ. ಕೋವಿಡ್ 19ರ ಲಸಿಕೆ ನೀಡುವಿಕೆ ಅಭಿಯಾನಕ್ಕೆ 35,000 ಕೋಟಿ ರೂ. ಮೀಸಲಿಡಲಾಗಿದೆ ಎಂದು ಅವರು ಹೇಳಿದರು.

17,788 ಗ್ರಾಮೀಣ ಮತ್ತು 11,024 ನಗರ ಆರೋಗ್ಯ ಮತ್ತು ಕಲ್ಯಾಣ ಕೇಂದ್ರಗಳಿಗೆ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯ ಮೂಲಕ ನೆರವು ನೀಡಲಾಗುತ್ತಿದೆ. 602 ಜಿಲ್ಲೆಗಳು ಹಾಗೂ 12 ಕೇಂದ್ರ ಸಂಸ್ಥೆಗಳಲ್ಲಿ ತುರ್ತು ನಿಗಾ ಘಟಕಗಳನ್ನು ಆರಂಭಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಭಾರತದಲ್ಲಿ ಸಂಶೋಧನಾ ಸಂಸ್ಥೆ ಪ್ರಾರಂಭವಾಗಲಿದೆ ಎಂದು ಸೋಮಣ್ಣ ತಿಳಿಸಿದರು.

ಮನೆ ಮನೆಗೂ ಶುದ್ಧ ನೀರು ಒದಗಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ 24,435 ಕೋಟಿ ರೂ. ನೀಡಲಾಗುತ್ತಿದೆ. 4,378 ನಗರದ ಸ್ಥಳೀಯ ಪ್ರದೇಶದ ಎಲ್ಲ ಮನೆಗಳಿಗೆ ಕೊಳವೆ ನೀರಿನ ಸಂಪರ್ಕ ನೀಡುವ ಜಲ್ ಜೀವನ್ ಯೋಜನೆ ಆರಂಭಿಸಲಾಗುವುದು ಎಂದು ಸೋಮಣ್ಣ ಹೇಳಿದರು.

ಮೂಲ ಸೌಕರ್ಯಕ್ಕೆ ದಾಖಲೆ ಮಟ್ಟದಲ್ಲಿ ಬಂಡವಾಳ ವೆಚ್ಚ ಮಾಡಲಾಗುವುದು. ಒಳನಾಡು ಸಾರಿಗೆ, ಬಂದರು ಕ್ಷೇತ್ರದಲ್ಲಿ ಹೊಸದಾಗಿ 1.5 ಲಕ್ಷ ಉದ್ಯೋಗ ಸೃಷ್ಟಿಸುವ ಸಂಕಲ್ಪ ಇದೆ. ಎಕ್ಸ್‍ಪ್ರೆಸ್ ಹೆದ್ದಾರಿಗೆ 1,18,000 ಕೋಟಿ ರೂ. ನಿಗದಿಪಡಿಸಲಾಗಿದೆ, ದಿಲ್ಲಿ-ಮುಂಬೈ, ಬೆಂಗಳೂರು-ಚೆನ್ನೈ ಎಕ್ಸ್‍ಪ್ರೆಸ್ ಹೆದ್ದಾರಿ ನಿರ್ಮಾಣಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.

ದಿಲ್ಲಿ-ಡೆಹರಾಡೂನ್ ಎಕನಾಮಿಕ್ ಕಾರಿಡಾರ್ ಪ್ರಸಕ್ತ ವರ್ಷದಲ್ಲಿ ಆರಂಭಿಸಲಾಗುವುದು. ಭಾರತ್‍ಮಾಲಾ ಯೋಜನೆಯಡಿ 3.3 ಲಕ್ಷ ಕೋಟಿ ರೂ.ವೆಚ್ಚದಲ್ಲಿ 13,000 ಕಿ.ಮೀ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಪೈಕಿ ಈಗಾಗಲೇ 3,800 ಕಿ.ಮೀ ರಸ್ತೆ ಸಿದ್ಧಗೊಂಡಿದೆ ಎಂದು ಅವರು ತಿಳಿಸಿದರು.

ಭಾರತೀಯ ರೈಲ್ವೆ ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಇಂಜಿನ್ ಆಗಲಿದೆ. “ಮೇಕ್ ಇನ್ ಇಂಡಿಯಾ” ಯೋಜನೆಯಡಿ 2030ರ ವೇಳೆಗೆ ಭವಿಷ್ಯದ ರೈಲ್ವೆಯನ್ನು ಸುಸಜ್ಜಿತಗೊಳಿಸಲಾಗುವುದು. ಪ್ರಸಕ್ತ ವರ್ಷದಲ್ಲಿ ಭಾರತೀಯ ರೈಲ್ವೆಯಲ್ಲಿ ದಾಖಲೆಯ 1.07 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ ಮಾಡುವುದಲ್ಲದೆ, 2021ರ ಅಂತ್ಯಕ್ಕೆ ಶೇ.72ರಷ್ಟು ಹಾಗೂ 2023ರ ಡಿಸೆಂಬರ್ ವೇಳೆಗೆ ಶೇ.100 ರಷ್ಟು ಎಲ್ಲ ಬ್ರಾಡ್‍ಗೇಜ್ ಮಾರ್ಗಗಳ ವಿದ್ಯುದ್ದೀಕರಣ ಮಾಡಲಾಗುವುದು ಸೋಮಣ್ಣ ಹೇಳಿದರು.

ಉಜ್ವಲ ಯೋಜನೆಯಡಿ ಇನ್ನೂ 1 ಕೋಟಿ ಮಹಿಳೆಯರಿಗೆ ಸಬ್ಸಿಡಿ ಸಹಿತ ಉಚಿತ ಅಡುಗೆ ಅನಿಲದ ಸಂಪರ್ಕ ನೀಡಲಾಗುವುದು. ದೇಶಿಯ ಉತ್ಪಾದನೆಗೆ ಉತ್ತೇಜನ ನೀಡಿ ಆತ್ಮನಿರ್ಭರ ಭಾರತಕ್ಕೆ ಬೆಂಬಲ ನೀಡಲಾಗುವುದು. ಸ್ಥಳೀಯ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಕಚ್ಚಾ ರೇಷ್ಮೆ, ರೇಷ್ಮೆ ನೂಲು, ಕೆಲವು ಕಚ್ಚಾವಸ್ತುಗಳ ಆಮದಿಗೆ ಸುಂಕ ವಿಧಿಸಲಾಗಿದೆ ಎಂದು ಅವರು ತಿಳಿಸಿದರು.

ಉತ್ಪಾದನಾ ಉತ್ತೇಜನಕ್ಕೆ 1.97 ಲಕ್ಷ ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಉತ್ಪಾದನಾ ಕ್ಷೇತ್ರವನ್ನು ಮತ್ತು ರಫ್ತನ್ನು ಉತ್ತೇಜಿಸಲು ಆಯ್ಕೆಯಾದ 13 ವಲಯಗಳಲ್ಲಿ ಮಾಡುವ ಹೆಚ್ಚುವರಿ ಉತ್ಪಾದನೆಗೆ ಶೇ.4 ರಿಂದ ಶೇ.6 ವರೆಗೆ 1.97 ಲಕ್ಷ ಕೋಟಿ ರೂ.ನಗದು ಪ್ರೋತ್ಸಾಹಧನ ನೀಡಲಾಗುವುದು ಸೋಮಣ್ಣ ಹೇಳಿದರು.

75 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಪಿಂಚಣಿ ಮತ್ತು ಬಡ್ಡಿ ಆದಾಯಕ್ಕೆ ಸಂಬಂಧಿಸಿ ಆದಾಯ ವಿವರ ಸಲ್ಲಿಕೆಯಿಂದ (ಐಟಿಆರ್) ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ, ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X