Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೋವಿಕಾಸ ಮತ್ತು ಆತ್ಮೋನ್ನತಿಗಾಗಿ ಕಲೆ...

ಮನೋವಿಕಾಸ ಮತ್ತು ಆತ್ಮೋನ್ನತಿಗಾಗಿ ಕಲೆ ಅಗತ್ಯ: ನಟ ಡಾ. ಶ್ರೀಧರ್

ವಾರ್ತಾಭಾರತಿವಾರ್ತಾಭಾರತಿ14 Feb 2021 12:26 AM IST
share
ಮನೋವಿಕಾಸ ಮತ್ತು ಆತ್ಮೋನ್ನತಿಗಾಗಿ ಕಲೆ ಅಗತ್ಯ: ನಟ ಡಾ. ಶ್ರೀಧರ್

ಬೆಳ್ತಂಗಡಿ: ಕಲೆಯಿಂದ ಮನಸ್ಸು ಅರಳುತ್ತದೆ, ಬುದ್ಧಿ ಬೆಳೆಯುತ್ತದೆ. ಮನೋವಿಕಾಸ, ಆತ್ಮೋನ್ನತಿ ಮತ್ತು ಮನೋರಂಜನೆಗಾಗಿ ಕಲೆ ಅಗತ್ಯ. ನಾಟ್ಯಶಾಸ್ತ್ರ. ಎಲ್ಲಾ ಕಲೆಗಳಿಗೂ ಮಾತೃಸ್ಥಾನದಲ್ಲಿದೆ ಎಂದು ಖ್ಯಾತ ಚಲನಚಿತ್ರ ನಟ ಡಾ. ಶ್ರೀಧರ್ ಹೇಳಿದರು.

ಅವರು ಶನಿವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 18ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ನೀಡಿ ಮಾತನಾಡಿದರು.

ತಾನು ಆರಂಭದಲ್ಲಿ ಚಿತ್ರಕಲಾವಿದನಾಗಿ ನಂತರ ಸಂಗೀತ ಮತ್ತು ನೃತ್ಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದೆ ಎಂದು ಹೇಳಿದ ಅವರು, ಚಿತ್ರಕಲೆಯಲ್ಲಿ ಭಾವ, ಸೌಂದರ್ಯ ಮತ್ತು ತಂತ್ರಗಾರಿಕೆ ಅಡಕವಾಗಿದೆ. ಚಿತ್ರಕಲೆಗೆ ವಸ್ತುವಿನ ಆಯ್ಕೆ ಮುಖ್ಯವಾಗಿದೆ. ಮನಸ್ಸಿನ ಕಲ್ಪನೆಗಳಿಗೆ ಪ್ರಜ್ಞೆಯನ್ನು ಸೇರಿಸಿದಾಗ ಆಕರ್ಷಕ ಚಿತ್ರ ರೂಪಿಸಬಹುದು. ನೋಡಿದ ಅನುಭವವನ್ನು ಅಭಿವ್ಯಕ್ತಗೊಳಿಸಲು ಚಿತ್ರಕಲೆ ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ. ಕಲೆಯನ್ನು ಅನುಭವಿಸಿ, ಆಸ್ವಾದಿಸಿ, ಆನಂದಿಸಬೇಕು ಎಂದರು. ಸ್ಪರ್ಧೆಯಲ್ಲಿ ಪುರಸ್ಕಾರ ಪಡೆಯುವುದಕ್ಕಿಂತಲೂ ಭಾಗವಹಿಸುವುದು ಮುಖ್ಯ ಎಂದು ಅವರು ಸಲಹೆ ನೀಡಿದರು.

ಧರ್ಮಸ್ಥಳದಲ್ಲಿ ಸ್ವಚ್ಛತೆ, ಪಾವಿತ್ರ್ಯತೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾ ಭಾವದ ಸೇವೆಯನ್ನು ಅವರು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯ ವಿಕಸನಕ್ಕಾಗಿ ಅಂಚೆ-ಕುಂಚ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಚಿತ್ರಕಲೆಯಲ್ಲಿ ಅನುಕರಣೆ ಸಲ್ಲದು. ವಿದ್ಯಾರ್ಥಿಗಳು ವೈವಿಧ್ಯಮಯ ಅಭಿರುಚಿ ಹಾಗೂ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಚಿತ್ರಕಲೆಯಲ್ಲಿ ಉನ್ನತ ಶಿಕ್ಷಣ ಮಾಡುವವರಿಗೆ ಧರ್ಮಸ್ಥಳದಿಂದ ವಿಶೇಷ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಹೆಗ್ಗಡೆಯವರು ತಿಳಿಸಿದರು.
ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಂಗಳೂರಿನ ಖ್ಯಾತ ಚಿತ್ರ ಕಲಾವಿದ ಬಾಗೂರು ಮಾರ್ಕಾಂಡೇಯ ಹಾಗೂ ಮಂಗಳೂರಿನ ಸನಾತನ ನಾಟ್ಯಾಲಯದ ಕಲಾವಿದರಿಂದ ಕುಂಚ-ಗಾನ-ನೃತ್ಯ ವೈಭವ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ ಹದಿನೆಂಟನೆ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯಲ್ಲಿ ವಿಜೇತರು (ಆಲ್ ಎಡಿಶನ್)
ಪ್ರಾಥಮಿಕ ಶಾಲಾ ವಿಭಾಗ: ಕುಮಾರಿ ಪ್ರತಿಷ್ಠಾ ಶೇಟ್, ವಿದ್ಯೋದಯ ಪಬ್ಲಿಕ್ ಶಾಲೆ, ಉಡುಪಿ, (ಪ್ರಥಮ), ಕುಮಾರಿ ಶ್ರೀಮಯಿ, ಸಿ. ಭಾರತೀಯ ವಿದ್ಯಾಭವನ ಶಾಲೆ, ವಿಜಯನಗರ ಮೈಸೂರು (ದ್ವಿತೀಯ) ಕುಮಾರಿ ಲಕ್ಷö್ಯ, ಪಿ.ಎನ್. ಭಾರತೀಯ ವಿದ್ಯಾಭವನ ಶಾಲೆ, ಕೊಡಗು ವಿದ್ಯಾಲಯ, ಮಡಿಕೇರಿ (ತೃತೀಯ)

ಪ್ರೌಢಶಾಲಾ ವಿಭಾಗ: ಪ್ರಸಾದ ಶ್ರೀಧರ ಮೇತ್ರಿ, ಕಾತ್ಯಾಯಿನಿ ಪ್ರೌಢಶಾಲೆ, ಆವರ್ಸಾ, ಅಂಕೋಲಾ (ಪ್ರಥಮ) ಕುಮಾರಿ ಶ್ರೇಯಾ ಆರ್. ದೇಶಪಾಂಡೆ, ಸೈಂಟ್ ಜೋಸೆಫ್ ಶಾಲೆ, ಜಯಲಕ್ಷ್ಮಿ  ಪುರಂ ಮೈಸೂರು (ದ್ವಿತೀಯ) ಕುಮಾರಿ ಪ್ರತೀಕ್ಷಾ ಮರಕಿನಿ, ಪೂರ್ಣಪ್ರಜ್ಞ ಪ್ರೌಢಶಾಲೆ, ಸದಾಶಿವ ನಗರ, ಬೆಂಗಳೂರು (ತೃತೀಯ)

ಕಾಲೇಜು ವಿಭಾಗ: ಕುಮಾರಿ ಅನನ್ಯ ದೀಪಕ್ ನಾಯಕ್, ಸರ್ಕಾರಿ ಪದವಿಪೂರ್ವ ಕಾಲೇಜು, ಕಾರವಾರ (ಪ್ರಥಮ), ಅಖಿಲೇಶ್ ನಾಗೇಶ ನಾಯ್ಕ, ಶ್ರೀ ಸತ್ಯಸಾಯಿ ಪದವಿಪೂರ್ವ ಕಾಲೇಜು, ಅಳಿಕೆ (ದ್ವಿತೀಯ), ಜಯಪ್ರಕಾಶ್, ವಿವೇಕಾನಂದ ಕಾಲೇಜು, ಪುತ್ತೂರು (ತೃತೀಯ) 

ಸಾರ್ವಜನಿಕ ವಿಭಾಗ: ದಿನೇಶ ದೇವರಾಯ ಮೇತ್ರಿ, ಆವರ್ಸಾ, ಅಂಕೋಲಾ, (ಪ್ರಥಮ), ಲಕ್ಷಮೀಕಾಂತ ವಾಸುದೇವ ನಾಯ್ಕ, ಆವರ್ಸಾ, ಅಂಕೋಲಾ (ದ್ವಿತೀಯ), ರಾಜೇಶ್, ಡಿ.ಎಸ್. ವಾದಿರಾಜ ನಗರ, ಮಂಗಳೂರು (ತೃತೀಯ)

ನಾಲ್ಕು ವಿಭಾಗಗಳಿಂದ ಒಟ್ಟು16230 ಸ್ಪರ್ಧಾಳುಗಳು ಅಂಚೆ-ಕುಂಚ ಸ್ಪರ್ಧೆಯಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X