ತೊಕ್ಕೊಟ್ಟು: ರೈಲು ಢಿಕ್ಕಿಯಾಗಿ ಬ್ಯಾಂಕ್ ಉದ್ಯೋಗಿ ಸಾವು

ಸಾಂದರ್ಭಿಕ ಚಿತ್ರ
ತೊಕ್ಕೊಟ್ಟು: ರೈಲು ಢಿಕ್ಕಿಯಾಗಿ ಬ್ಯಾಂಕ್ ಉದ್ಯೋಗಿಯೋರ್ವರು ಸಾವನ್ನಪ್ಪಿದ್ದು, ಕೋಟೆಕಾರು, ಬೀರಿ ಭಂಡಾರಮನೆ ಬಳಿಯ ನಿವಾಸಿ ಸತೀಶ್ಚಂದ್ರ ನಾಯ್ಕ್ (28) ಮೃತಪಟ್ಟ ವ್ಯಕ್ತಿ. ಸ್ಥಳೀಯರು ಮಧ್ಯಾಹ್ನ ಹೊತ್ತಿಗೆ ಮೃತದೇಹ ನೋಡಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸತೀಶ್ಚಂದ್ರ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದು, ಸಾಲೆತ್ತೂರು ಶಾಖೆಯಿಂದ ಇತ್ತೀಚೆಗಷ್ಟೆ ಕೊಡಗಿನ ಮಡಿಕೇರಿಗೆ ವರ್ಗಾವಣೆಗೊಂಡಿದ್ದರು. ಇಂದು ವಾರದ ರಜಾ ದಿನ ಆಗಿದ್ದರಿಂದ ನಿನ್ನೆ ಮಡಿಕೇರಿಯಿಂದ ಊರಿಗೆ ಬಂದಿದ್ದರು. ನಿನ್ನೆ ರಾತ್ರಿ 9 ಗಂಟೆಗೆ ಮನೆಗೆ ಬಂದಿದ್ದ ಸತೀಶ್ವಂದ್ರ, ತೊಕ್ಕೊಟ್ಟಿಗೆ ಹೋಗಿದ್ದವರು ಹಿಂತಿರುಗಿ ಬಂದಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.
ರೈಲ್ವೇ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
Next Story





