Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಂತರ ಸ್ಮಾರ್ಟ್ ಕ್ಲಿನಿಕ್,...

ಕೋವಿಡ್ ನಂತರ ಸ್ಮಾರ್ಟ್ ಕ್ಲಿನಿಕ್, ಡಿಜಿಟಲ್ ಕನ್ಸಲ್‍ಟೇಶನ್‍ಗೆ ಹೆಚ್ಚಿನ ಅವಕಾಶ: ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ14 Feb 2021 7:59 PM IST
share
ಕೋವಿಡ್ ನಂತರ ಸ್ಮಾರ್ಟ್ ಕ್ಲಿನಿಕ್, ಡಿಜಿಟಲ್ ಕನ್ಸಲ್‍ಟೇಶನ್‍ಗೆ ಹೆಚ್ಚಿನ ಅವಕಾಶ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಫೆ. 14: ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರವನ್ನು ಸಾಕಷ್ಟು ಕಡೆಗಣಿಸಲಾಗಿತ್ತು. ಆದರೆ, ಕೋವಿಡ್ ಮಹಾಮಾರಿ ವಕ್ಕರಿಸಿದ ನಂತರ ಈ ಕ್ಷೇತ್ರದ ಮಹತ್ವದ ಎಲ್ಲರಿಗೂ ಗೊತ್ತಾಯಿತಲ್ಲದೆ, ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕ್ಲಿನಿಕ್ ಹಾಗೂ ಡಿಜಿಟಲ್ ಕನ್ಸಲ್‍ಟೇಶನ್ ಯುಗ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ರವಿವಾರ ಇಲ್ಲಿನ ಬನ್ನೇರುಘಟ್ಟ ರಸ್ತೆಯ ಕೃಷ್ಣ ಕುಟೀರದ ಸಮೀಪ ಸ್ಥಾಪಿಸಲಾಗಿರುವ ಸಾಯಿರಾಮ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯರೆಲ್ಲರೂ ನಗರ ಪ್ರದೇಶಗಳೇ ಬೇಕೆನ್ನುತ್ತಿದ್ದಾರೆ. ಹೀಗಾಗಿ ಆರೋಗ್ಯ ಸೇವೆಯಲ್ಲಿ ನಗರ-ಗ್ರಾಮೀಣ ಪ್ರದೇಶಗಳ ನಡುವೆ ಕಂದಕ ಸೃಷ್ಟಿಯಾಗಿದೆ. ಕೋವಿಡ್ ನಂತರ ಈ ಕಂದಕ ಬಹುತೇಕ ನಿವಾರಣೆಯಾಗುತ್ತಿದ್ದು, ಸ್ಮಾರ್ಟ್ ಕ್ಲಿನಿಕ್ ವ್ಯವಸ್ಥೆ ಹೆಚ್ಚಿದಂತೆಲ್ಲ ಡಿಜಿಟಲ್ ಕನ್ಸಲ್‍ಟೇಶನ್ ಜನಪ್ರಿಯವಾಗುತ್ತಿದೆ. ರೋಗಿ ಎಲ್ಲೇ ಇದ್ದರೂ ಆನ್‍ಲೈನ್ ಮೂಲಕವೇ ಚಿಕಿತ್ಸೆಯನ್ನು ಪಡೆಯಬಹುದು. ಹಿಂದೆ ಡಿಜಿಟಲ್ ಕನ್ಸಲ್‍ಟೇಶನ್‍ಗೆ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಈಗ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಸ್ಮಾರ್ಟ್ ಕ್ಲಿನಿಕ್ ವ್ಯವಸ್ಥೆ ಹಾಗೂ ಡಿಜಿಟಲ್ ಕನ್ಸಲ್‍ಟೇಶನ್‍ಗೆ ಇಪ್ಪತ್ತು ನಾಲ್ಕು ಗಂಟೆ ವಿದ್ಯುತ್ ಹಾಗೂ ಹೈಸ್ಪೀಡ್ ಇಂಟರ್ ನೆಟ್ ಕನೆಕ್ಟಿವಿಟಿ ಅಗತ್ಯ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಸರಕಾರ ಮಾಡುತ್ತಿದೆ ಎಂದ ಅವರು, ನಾವು ರಸ್ತೆ, ನೀರು, ವಿದ್ಯುತ್ ಮತ್ತಿತರೆ ಮೂಲಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿ ಮಾತನಾಡುತ್ತೇವೆ. ಸರಕಾರಗಳು ಇಂಥ ವಿಷಯಗಳಿಗೇ ಹೆಚ್ಚು ಆದ್ಯತೆ ನೀಡಿವೆ ನಿಜ. ಆದರೆ, ಆರೋಗ್ಯ ಕ್ಷೇತ್ರಕ್ಕೂ ಇಷ್ಟೇ ಮಹತ್ವ ನೀಡಲೇಬೇಕು ಎಂದರು.

ಕೋವಿಡ್ ಬಂದಾಗ ನಮ್ಮಲ್ಲಿದ್ದ ಆರೋಗ್ಯ ವ್ಯವಸ್ಥೆಯ ಶಕ್ತಿ ಏನೆಂಬುದರ ಅರಿವಾಯಿತು. ಸರಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‍ಗಳ ಮಾತಿರಲಿ ಸಾಮಾನ್ಯ ಬೆಡ್‍ಗಳೇ ಇಲ್ಲದಂಥ ಪರಿಸ್ಥಿತಿ ಇತ್ತು. ಆಕ್ಸಿಜನ್ ಸೌಲಭ್ಯ, ಎಮರ್ಜೆನ್ಸಿ ಸೌಲಭ್ಯ ಹೀಗೆ ಯಾವುದೇ ಸೌಲಭ್ಯ ಬೇಕಾದರೂ ಜನರು ಹುಡುಕಾಡುವ ಸನ್ನಿವೇಶ ಇತ್ತು. ಈಗ ಅಂಥ ಸಮಸ್ಯೆಗಳೇ ಇಲ್ಲ. ಎಲ್ಲ ಆಸ್ಪತ್ರೆಗಳಿಗೂ ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ, ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯವಾದ ಅರೆವೈದ್ಯ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ನುಡಿದರು.

ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಬಾರದು ಎಂಬುದು ನಮ್ಮ ಸರಕಾರದ ಬದ್ಧತೆ. ಸಮಾಜವನ್ನು ಕಾಪಾಡಿಕೊಳ್ಳಬೇಕಾದರೆ ಆರೋಗ್ಯ ಕ್ಷೇತ್ರವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದೆ ಮಾತ್ರವಲ್ಲದೆ, ಮಾನವ ಸಂಪನ್ಮೂಲ ಕೊರತೆ ಆಗದಂತೆ ನೋಡಿಕೊಂಡಿದೆ. ಜತೆಗೆ ವೈದ್ಯಕೀಯ ಕೋರ್ಸಿನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ದೊಡ್ಡ ಪ್ರಮಾಣದ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.

ಶಾಸಕ ಸತೀಶ್ ರೆಡ್ಡಿ, ಹೃದ್ರೋಗ ತಜ್ಞ ವಿವೇಕ್ ಜವಳಿ, ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಕೆನರಾ ಬ್ಯಾಂಕ್ ಅಧಿಕಾರಿ ನಯನ, ಬಿಬಿಎಂಪಿ ಮಾಜಿ ಸದಸ್ಯ ಮುರಳಿ, ಪುರುಷೋತ್ತಮ್, ಭಾಗ್ಯಲಕ್ಷ್ಮೀ ಹಾಗೂ ಡಾ.ವಿವೇಕಾನಂದ, ವಿಷ್ಣುಭಟ್, ಡಾ.ಬಾಲಕೃಷ್ಣ ಭಟ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

‘ಕೋವಿಡ್ ನಂತರ ಕರ್ನಾಟಕವನ್ನು ಇಡೀ ಜಗತ್ತು ಅಮೆರಿಕವನ್ನು ನೋಡುವಂತೆ ನೋಡತ್ತಿದೆ. ಹಿಂದೆ ನಮ್ಮ ದೇಶದ ಜನರು ಅವಕಾಶಗಳಿಗಾಗಿ ಅಮೆರಿಕದತ್ತ ನೋಡುತ್ತಿದ್ದರು. ಈಗ ಕರ್ನಾಟಕದತ್ತ ನೋಡುತ್ತಿದ್ದಾರೆ. ಇಡೀ ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದೆ. ಅನೇಕ ಪ್ರತಿಭಾವಂತರು ಬೆಂಗಳೂರಿಗೆ ಧಾವಿಸಿ ಬರುತ್ತಿದ್ದಾರೆ'

-ಡಾ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X