ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ: ಯಡಿಯೂರಪ್ಪ

ಶಿವಮೊಗ್ಗ, ಫೆ.14: ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ. ಕಾನೂನೂ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ಮೂಲಕ ಈ ಹೋರಾಟಗಳನ್ನು ತುದಿ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಕೆಡಿಪಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ ಎಂದರು.
ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಆಸ್ಪದವಾಗದಂತೆ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕಳಪೆ ಕಾಮಗಾರಿ ಸಹಿಸುವುದಿಲ್ಲ ಎಂದರು.
ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಿದ್ದೇನೆ. ಕಾಮಗಾರಿಗಳು ಆದಷ್ಟು ಬೇಗನೆ ಪೂರ್ಣಗೊಳಿಸಲಾಗುವುದು ಎಂದರು.
ಶಿಕಾರಿಪುರ ಮಾದರಿ ತಾಲೂಕು ಮಾಡುವುದು ನನ್ನ ಗುರಿ. ಅಧಿಕಾರಿಗಳು ಇದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಈ ಬಾರಿ ಒಳ್ಳೆಯ, ರೈತಪರ ಬಜೆಟ್ ನೀಡಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.
Next Story





