ಮನೆ ಬಾಗಿಲಿಗೆ ಮಾಸಾಶನ: ಫೆ.15ರಂದು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ
ಬೆಂಗಳೂರು, ಫೆ. 14: ‘ಕಂದಾಯ ಗ್ರಾಮಗಳ ರಚನೆ, ಮನೆ ಬಾಗಿಲಿಗೆ ಮಾಸಾಶನ ಹಾಗೂ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ವಿಷಯದ ಕುರಿತು ನಾಳೆ(ಫೆ.15) ಕಂದಾಯ ಸಚಿವ ಆರ್.ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದವನ್ನು ಏರ್ಪಡಿಸಲಾಗಿದೆ.
ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ವಿಡಿಯೋ ಸಂವಾದ ಮಧ್ಯಾಹ್ನ 12ಗಂಟೆಗೆ ನಡೆಯಲಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಂದಾಯ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಂ.ಇ.ಚನ್ನಬಸವರಾಜು ತಿಳಿಸಿದ್ದಾರೆ.
Next Story





