Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ...

ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸರ್ವತೋಮುಖ ಅಭಿವೃದ್ಧಿ: ಯಡಿಯೂರಪ್ಪ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ15 Feb 2021 2:38 PM IST
share
ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸರ್ವತೋಮುಖ ಅಭಿವೃದ್ಧಿ: ಯಡಿಯೂರಪ್ಪ

ಶಿವಮೊಗ್ಗ, ಫೆ.15: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಅವರು ಸೋಮವಾರ ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವರ್ಚುವಲ್ ಕಾರ್ಯಕ್ರಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶೀಘ್ರವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ಪ್ರವಾಸೋದ್ಯಮದ ಪ್ರಾಮುಖ್ಯತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯ ಭರಣಾಪುರ ಹಾಗೂ ಮದಭಾವಿ ಗ್ರಾಮಗಳಲ್ಲಿನ ಸುಮಾರು 727 ಎಕರೆ ಜಮೀನಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ನಿಂಬೆ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು, ಒಣ ದ್ರಾಕ್ಷಿ ಮತ್ತು ನಿಂಬೆ ಹಣ್ಣನ್ನು ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ. ವಿಮಾನ ನಿಲ್ದಾಣ ಪ್ರಾರಂಭದಿಂದ ಈ ಎಲ್ಲಾ ಚಟುವಟಿಕೆಗಳಿಗೆ ಹೆಚ್ಚಿನ ಮಾರುಕಟ್ಟೆ ಲಭ್ಯವಾಗಲಿದೆ ಎಂದರು. 

ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿ ಹಾಗೂ ಕಾರ್ಯಾಚರಣೆಯನ್ನು ಕೇಂದ್ರಿಯ ನಾಗರೀಕ ವಿಮಾನಯಾನ ಸಚಿವಾಲಯದ ಭಾರತೀಯ ವಿಮಾನಯಾನ ಪ್ರಾಧಿಕಾರದೊಂದಿಗೆ ಉಡಾನ್ ಯೋಜನೆ ಅಡಿ ಸೇರ್ಪಡಿಸಲು ಕ್ರಮವಹಿಸಲಾಗುತ್ತಿದೆ. ಕಾಮಗಾರಿಯನ್ನು ಎ.ಟಿ.ಆರ್-72 ವಿಮಾನಗಳ ಹಾರಾಟಕ್ಕಾಗಿ ನಿರ್ಮಿಸಲಾಗಿದ್ದು, ಮುಂದೆ ಅದನ್ನು ಏರ್‌ಬಸ್ -320 ಗಳ ಹಾರಾಟಕ್ಕಾಗಿ ವಿಸ್ತರಿಸುವಂತೆ ವಿನ್ಯಾಸಗೊಳಿಸಲಾಗಿದೆ. ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ಪ್ರಾರಂಭಿಸುವುದರಿಂದ, ಜನಸಾಮಾನ್ಯರು ಸಹ ವಿಮಾನಯಾನವನ್ನು ಕೈಗೊಳ್ಳಬಹುದಾಗಿದೆ ಎಂದು ಹೇಳಿದರು. 

ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಶೀಘ್ರಗತಿಯಲ್ಲಿ ನಡೆಯುತ್ತಿದ್ದು, ಅದೇ ರೀತಿ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಹ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು. 

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ವಿಜಯಪುರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಶಾಸಕ ದೇವಾನಂದ ಚೌವ್ಹಾಣ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X