ಬಾಲಮಂದಿರದ ಮಕ್ಕಳಿಗೆ ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಾಗಾರ

ಉಡುಪಿ, ಫೆ.15: ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ನಿಟ್ಟೂರು ಸರಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯ ಕ್ರಮವನ್ನು ಇಂದು ಬಾಲಮಂದಿರದಲ್ಲಿ ಆಯೋಜಿಸಲಾಗಿತ್ತು
ಕಾರ್ಯಕ್ರಮವನ್ನು ಉದ್ಘಾಟಿಸಿದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅವರಿಗೆ ಕಲಿಕೆಯೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿರವುದು ಸ್ವಾಗತಾರ್ಹ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಭಾಸ್ಕರ್ ಎ.ಅಮೀನ್, ಕುಂದಾಪುರ ಸೃಷ್ಟಿ ಇನ್ಫೋಟೆಕ್ ಮುಖ್ಯಸ್ಥ ಹರ್ಷವರ್ಧನ್ ಶೆಟ್ಟಿ ಉಪಸ್ಥಿತರಿದ್ದರು.
ರಕ್ಷಣಾಧಿಕಾರಿ ಮಹೇಶ್ ದೇವಾಡಿಗ ಸ್ವಾಗತಿಸಿದರು. ಕಾನೂನು ಪರಿವೀಕ್ಷ ಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಬಾಲ ಮಂದಿರದ ಅಧೀಕ್ಷಕಿ ಸುಮತಿ ವಂದಿಸಿದರು. ಬಾಲಕಿಯರ ಬಾಲಮಂದಿರದ ಮಕ್ಕಳಿಗೆ ಒಂದು ತಿಂಗಳು ಕಂಪ್ಯೂಟರ್, ಟೈಲರಿಂಗ್ ಮತ್ತು ಬ್ಯುಟಿಷಿಯನ್ ತರಬೇತಿಯನ್ನು ಸೃಷ್ಟಿ ಇನ್ಫೋಟೆಕ್ ನೀಡಲಿದೆ.







