ನರಿಂಗಾನ ಗ್ರಾಮ ಪಂಚಾಯತ್: ಶೈಲಜಾ ಶೆಟ್ಟಿ ಅಧ್ಯಕ್ಷೆ, ನವಾಝ್ ಉಪಾಧ್ಯಕ್ಷ
ಕೊಣಾಜೆ: ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಾದ ಶೈಲಜಾ ಶೆಟ್ಟಿ ಹಾಗೂ ನವಾಝ್ ಅವಿರೋಧ ಆಯ್ಕೆಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ನರಿಂಗಾನ ಗ್ರಾಮ ಪಂಚಾಯಿತಿಯ ಒಟ್ಟು 17ಸದಸ್ಯರ ಪೈಕಿ 17ಸದಸ್ಯರು ಕೂಡಾ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಆಯ್ಕೆಯಾಗಿರುವುದು ಮಂಗಳೂರು ಕ್ಷೇತ್ರದಲ್ಲಿ ದಾಖಲೆ ಬರೆದಿದ್ದು, ಶೈಲಜಾ ಶೆಟ್ಟಿ ಹಾಗೂ ನವಾಝ್ ಎರಡನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಮೊದಲ ಬಾರಿಗೆ ಆಡಳಿತ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಅಬೂಬಕ್ಕರ್ ಸಿದ್ದಿಕ್ ಪಾರೆ ಹಾಗೂ ಜೋಸೆಫ್ ಕುಟಿನ್ಹಾ, ವಲಯಾಧ್ಯಕ್ಷ ಹನೀಫ್ ಚಂದಹಿತ್ಲು ಉಪಸ್ಥಿತರಿದ್ದರು.