ಬೀದಿ ಬದಿ ವ್ಯಾಪಾರಕ್ಕೆ ನಿರ್ಬಂಧ
ಉಡುಪಿ, ಫೆ.15: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರದ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ನಗರಸಭಾ ವ್ಯಾಪ್ತಿಯ ಪ್ರಮುಖ ಬಸ್ ತಂಗುದಾಣ, ರಸ್ತೆ ಹಾಗೂ ವೃತ್ತಗಳ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳು, ಎಪಿಎಂಸಿ ಮಾರುಕಟ್ಟೆಯ ಆವರಣಕ್ಕೆ ತಕ್ಷಣವೇ ಸ್ಥಳಾಂತರಗೊಳ್ಳಬೇಕು. ತಪ್ಪಿದ್ದಲ್ಲಿ ನಗರಸಭೆ ವತಿಯಿಂದ ಫೆ.18ರಂದು ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





