ಉಡುಪಿ: ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
ಉಡುಪಿ, ಫೆ.15: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಫೆ.17ರಂದು ಬೆಳಗ್ಗೆ 10:30ಕ್ಕೆ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕುಂದಾಪುರ ತಾಪಂ ಅಧ್ಯಕ್ಷೆ ಎಚ್. ಇಂದಿರಾ ಶೆಟ್ಟಿ ಹರ್ಕೂರು, ಕುಂದಾಪುರ ಪುರಸಬೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ಉಪವಿಬಾಗದ ಸಹಾಯಕ ಆಯುಕ್ತ ಕೆ. ರಾಜು, ಕುಂದಾಪುರ ತಹಶೀಲ್ದಾರ್ ಬಿ. ಆನಂದಪ್ಪ ನಾಯಕ್, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ. ಭಾಗವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





