ಮಂಗಳೂರು ವಿವಿ ಕಾನೂನು ಪದವಿಯ ಪುನರಾವರ್ತಿತ ಪರೀಕ್ಷೆ
ಮಂಗಳೂರು, ಫೆ.15: ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಪ್ರಸ್ತುತ ಸಾಲಿನ ಏಪ್ರಿಲ್‌ನಲ್ಲಿ ನಡೆಸಲಾಗುವುದು. ಪರೀಕ್ಷೆ ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾ ಕಾಲೇಜುಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಚೇರಿ (ಪರೀಕ್ಷಾಂಗ), ಮಂಗಳ ಗಂಗೋತ್ರಿ ದೂ.ಸಂ.: 0824- 2287327/ 2287659ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಪರೀಕ್ಷಾಂಗ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





