ವಕ್ಫ್ ಆಸ್ತಿ ಕಬಳಿಕೆ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಫೆ.15: ಕೋಟ್ಯಂತರ ರೂ. ಬೆಲೆ ಬಾಳುವ ವಕ್ಫ್ ಆಸ್ತಿ ಅಕ್ರಮಗಳ ಕುರಿತಂತೆ ಸಿಬಿಐ ತನಿಖೆ ಹಾಗೂ ಉಪ ಲೋಕಾಯಕ್ತ ನೀಡಿರುವ ವರದಿಯನ್ನು ಜಾರಿಗೆ ತರಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಕಲಬುರಗಿಯ ಮಾಜಿ ಸಚಿವ ಎಸ್.ಕೆ.ಕಾಂತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಕೋಟ್ಯಂತರ ರೂ. ಮೌಲ್ಯದ ವಕ್ಫ್ ಆಸ್ತಿ ದುರ್ಬಳಕೆ ಬಗ್ಗೆ ವರದಿ ನೀಡಿ ಮೂರು ವರ್ಷಗಳಾದರೂ ಇನ್ನೂ ಸರಕಾರ ವರದಿಯನ್ನು ಬಹಿರಂಗಪಡಿಸುತ್ತಿಲ್ಲ. ಕಾನೂನು ಪ್ರಕಾರ ಅದನ್ನು ಸದನದ ಮುಂದೆ ಇಡುತ್ತಿಲ್ಲ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೆ, ತಟಸ್ಥ ನಿಲುವು ಪ್ರದರ್ಶಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಅನ್ವರ್ ಮಾಣಿಪ್ಪಾಡಿ 2012ರಲ್ಲಿ ವಕ್ಫ್ ಮಂಡಳಿಗೆ ಸೇರಿದ 27 ಸಾವಿರ ಕೋಟಿ ಆಸ್ತಿ ದುರ್ಬಳಕೆ ಆಗಿದೆ ಎಂದು ಸರಕಾರಕ್ಕೆ ವರದಿ ನೀಡಿದ್ದರು.
Next Story





