ಹೊಸದಿಲ್ಲಿಯಲ್ಲಿ ಎ.ಕೆ ಆ್ಯಂಟನಿ, ರಾಹುಲ್ ಗಾಂಧಿಯನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ, ಫೆ.16: ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಹೊಸದಿಲ್ಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ, ಸಂಜೆ ವೇಳೆಗೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಝಮೀರ್ ಅಹ್ಮದ್, ರಿಝ್ವಾನ್ ಅರ್ಶದ್, ಎಚ್.ಎಂ ರೇವಣ್ಣ, ಐವನ್ ಡಿಸೋಜಾ, ಪ್ರಕಾಶ್ ರಾಥೋಡ್ ಜೊತೆಗಿದ್ದರು.
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಾದ ಎ.ಕೆ ಆ್ಯಂಟನಿ, ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿಯಾದರು.
ಇಂದು ರಾತ್ರಿ ಹೊಸದಿಲ್ಲಿಯಲ್ಲೆ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ, ಬುಧವಾರ ಮಧ್ಯಾಹ್ನ 2.10ಕ್ಕೆ ಹೊಸದಿಲ್ಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
Met Shri. @RahulGandhi in Delhi today along with Shri. @BZZameerAhmedK, Shri. H M Revanna, Shri. @ArshadRizwan, Shri. @Ivan_MLC, Shri. Ashok Pattan & Shri. Prakash Rathod. pic.twitter.com/jdByEURHLf
— Siddaramaiah (@siddaramaiah) February 16, 2021
Met senior @INCIndia leader Shri. A K Antony in New Delhi today & discussed about various issues. pic.twitter.com/6hiIRyaGhP
— Siddaramaiah (@siddaramaiah) February 16, 2021







