Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬಾಲಕಾರ್ಮಿಕರನ್ನು ನೇಮಿಸಿಕೊಂಡವರಿಗೆ...

​ಬಾಲಕಾರ್ಮಿಕರನ್ನು ನೇಮಿಸಿಕೊಂಡವರಿಗೆ ಎರಡು ವರ್ಷ ಜೈಲು: ಉಡುಪಿ ಜಿಲ್ಲಾಧಿಕಾರಿ

ಬಾಲಕಾರ್ಮಿಕ ತಿದ್ದುಪಡಿ ಕಾಯ್ದೆ ಕುರಿತ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ16 Feb 2021 6:53 PM IST
share
​ಬಾಲಕಾರ್ಮಿಕರನ್ನು ನೇಮಿಸಿಕೊಂಡವರಿಗೆ ಎರಡು ವರ್ಷ ಜೈಲು: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಫೆ.16: ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

ಮಂಗಳವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಹೆಚ್ಚಿನ ಜನ ಶಿಕ್ಷಣ ಹೊಂದಿ ಪ್ರಜ್ಞಾವಂತರಾಗಿದ್ದು, ಕಾನೂನಿನ ಅರಿವು ಹೊಂದಿ ಅದನ್ನು ಗೌರವಿಸಿ, ಪಾಲಿಸಬೇಕಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳದೇ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು. ಬಾಲ ಕಾರ್ಮಿಕರನ್ನು ಯಾವುದೇ ಕಾರ್ಯಕ್ಕೆ ನಿಯೋಜಿಸಿಕೊಂಡಲ್ಲಿ ಅಂತವರಿಗೆ ಆರು ತಿಂಗಳಿಗಿಂತ ಕಡಿಮೆ ಇಲ್ಲದಂತೆ ಎರಡು ವರ್ಷದವರೆಗೆ ಜೈಲು ಶಿಕ್ಷೆ ಅಥವಾ 20,000 ರೂ. ಯಿಂದ 50,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದರು.

ಹೊರ ಜಿಲ್ಲೆ ಹಾಗೂ ಹೊರರಾಜ್ಯಗಳಿಂದ ವೃತ್ತಿಯನ್ನು ಅರಸಿ ಬರುವ ಕಾರ್ಮಿಕರು ತಮ್ಮ ಮಕ್ಕಳು ದುಡಿಮೆಗೆ ಹೋದಲ್ಲಿ ಹಣ ಗಳಿಸಬಹುದು ಎಂಬ ಮನೋಭಾವದಿಂದ ಸಣ್ಣ ಪುಟ್ಟ ಉದ್ಯೋಗಳಿಗೆ ಕಳುಹಿಸಲು ಮುಂದಾಗುತ್ತಾರೆ. ಇದಕ್ಕೆ ಕಡಿವಾಣ ಹಾಕಿ ಅವರುಗಳು ಶಾಲೆಗೆ ಹೋಗುವಂತೆ ಮಾಡಿ, ವಿದ್ಯಾವಂತರನ್ನಾಗಿಸಬೇಕೆಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಮಿಕರು ತಂಗಲು ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳಾದ ಕುಡಿಯಲು ನೀರು, ಶೌಚಾಲಯ ಸೇರಿದಂತೆ ಮತ್ತಿತರ ಸೌಲ್ಯವನ್ನು ಕಲ್ಪಿಸುವ ಕಾರ್ಯವನ್ನು ಮಾಲಕರು ಮಾಡಿದಾಗ ಅವರುಗಳಿಂದ ಹೆಚ್ಚಿನ ದುಡಿಮೆಯನ್ನು ಮಾಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವ ಎರಡು ಪ್ರಕರಣಗಳಿವೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಹಾಗೂ ಅಧಿಕಾರಿಗಳ ಮೇಲಿದೆ ಎಂದರು.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮುಂಜಾನೆಯ ವೇಳೆ ಹೊರ ಜಿಲ್ಲೆಗಳಿಂದ ಬಂದಿರುವ ಕಾರ್ಮಿಕರ ಮಕ್ಕಳು ಮೀನುಗಳನ್ನು ಆರಿಸುವ ಕೆಲಸ ಮಾಡುತ್ತಾರೆ. ಇದಕ್ಕೆ ಆಸ್ಪದ ನೀಡಬಾರದು. ಅಧಿಕಾರಿಗಳು ಆಗಿಂದ್ದಾಗೆ ಅನಿರೀಕ್ಷಿತ ಭೇಟಿ ಮಾಡಿ, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅವರುಗಳ ಪೋಷಕರ ಗಮನಕ್ಕೆ ತಂದು ಪೂರ್ಣಪ್ರಮಾಣದಲ್ಲಿ ನಿಲ್ಲಿಸಬೇಕು ಎಂದರು.

ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಮಾತನಾಡಿ, ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಸಾಮಾನ್ಯವಾಗಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬದವರ ಮಕ್ಕಳು ಬಾಲ ಕಾರ್ಮಿಕರಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಎಚ್ಚರಿಸಬೇಕು. ಸಂವಿಧಾನದಲ್ಲಿ ಮಕ್ಕಳ ರಕ್ಷಣೆಗಾಗಿ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆಯ ಮಡಿಕೆ ಪತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ಒಂದು ಮಾರಕ ಪಿಡುಗಾಗಿದ್ದು, ಇದು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ ಹಾಗೂ ಮಾನಸಿಕವಾಗಿ ಶೋಷಣೆಗೆ ಒಳಪಡಿಸುವುದರೊಂದಿಗೆ ಶಿಕ್ಷಣ ವಂಚಿತರನ್ನಾಗಿಸುತ್ತದೆ. ಇದರ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕನೂ ಮುಂದಾಗಬೇಕು ಎಂದರು.

ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳನ್ನು ದುಡಿಸಿಕೊಳ್ಳುವುದು ಪ್ರಾಚೀನ ಕಾಲದಿಂದಲೂ ನಡೆಯುತ್ತಿದೆ. ಇದರ ನಿರ್ಮೂಲನೆಗೆ ಸ್ವತಂತ್ರ ಪೂರ್ವದಲ್ಲಿಯೇ ಕಾನೂನನ್ನು ಜಾರಿಗೆ ತರಲಾಗಿತ್ತು ಎಂದ ಅವರು 1996 ರಿಂದ ಈಚೆಗೆ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಬಾಲ ಕಾರ್ಮಿಕ ಮುಕ್ತ ದೇಶವನ್ನಾಗಿಸಬೇಕು ಎಂದರು.

ಸಾರ್ವಜಿನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್.ನಾಗೂರ್ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ತಿದ್ದುಪಡಿ ಕಾಯ್ದೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ಶೇಷಪ್ಪ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X