Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.18ರಂದು ನಮ್ಮ ಕುಡ್ಲ ಟಾಕೀಸ್ ಲಾಂಛನ...

ಫೆ.18ರಂದು ನಮ್ಮ ಕುಡ್ಲ ಟಾಕೀಸ್ ಲಾಂಛನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Feb 2021 7:02 PM IST
share
ಫೆ.18ರಂದು ನಮ್ಮ ಕುಡ್ಲ ಟಾಕೀಸ್ ಲಾಂಛನ ಬಿಡುಗಡೆ

 ಮಂಗಳೂರು, ಫೆ.16: ನಮ್ಮ ಕುಡ್ಲ ಟಿವಿ ಚಾನೆಲ್‌ನ ಹೊಸ ಪರಿಕಲ್ಪನೆಯಾದ ‘ನಮ್ಮ ಕುಡ್ಲ ಟಾಕೀಸ್’ನ ಲಾಂಛನ ಬಿಡುಗಡೆ ಫೆ.18ರಂದು ಓಶಿಯನ್ ಪರ್ಲ್‌ನಲ್ಲಿ ಸಂಜೆ 3.30ಕ್ಕೆ ನಡೆಯಲಿದೆ. ಇದರ್ಲಿ ತುಳು ಸಿನಿಮಾ ರಂಗದ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಲ್ನಾಡ್ ಇನ್ಫೋಟೆಕ್ ಲಿಮಿಟೆಡ್‌ನ ಸಿಇಒ ಹರೀಶ್ ಬಿ. ಕರ್ಕೇರ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಸಿನಿಮಾ ರಂಗ ಬಹಳಷ್ಟು ಕೊರಗಿದೆ. ಅದರಲ್ಲೂ ತುಳು ಸಿನಿಮಾ ರಂಗಕ್ಕಂತೂ ಸಾಕಷ್ಟು ಬಿಸಿ ತಟ್ಟಿದೆ. ಈ ನಿಟ್ಟಿನಲ್ಲಿ ತುಳು ಸಿನಿ ರಂಗಕ್ಕೆ ಸಹಾಯ ಮಾಡುವ ದೃಷ್ಟಿಯಿಂದ ನಮ್ಮ ಕುಡ್ಲ ಟಾಕೀಸ್‌ನ್ನು ಆರಂಭ ಮಾಡುತ್ತಿದ್ದೇವೆ. ನಮ್ಮ ಕುಡ್ಲ ಟಾಕೀಸ್‌ನಲ್ಲಿ ತುಳುವಿನ ಹೊಸ ಚಿತ್ರಗಳನ್ನು ಒಂದು ತಿಂಗಳ ಕಾಲ ಪ್ರಸಾರ ಮಾಡಲಾಗುತ್ತದೆ. ಈ ಸಮಯದಲ್ಲಿ ಚಿತ್ರ ನಿರ್ಮಾಪಕರು ಈ ಚಿತ್ರವನ್ನು ಸಿನಿಮಾ ಮಂದಿರದಲ್ಲಿ ಹಾಕಬಾರದು. ಒಂದು ತಿಂಗಳ ಬಳಿಕ ಇದನ್ನು ಚಿತ್ರಮಂದಿರದಲ್ಲಿ ಪ್ರದರ್ಶಿಸಲು ಅವಕಾಶವಿದೆ. ಇದರ ಜತೆಯಲ್ಲಿ ಕುಡ್ಲ ಟಾಕೀಸ್ ಹಾಕಿದ ಬಳಿಕ ಒಂದು ಪ್ರೀಮಿಯರ್ ಶೋ ಮಾಡುವ ಅವಕಾಶವನ್ನು ಚಿತ್ರ ತಂಡಕ್ಕೆ ಮಾಡಲಾಗುತ್ತದೆ. ಚಿತ್ರದ ಪ್ರತಿಯಾಗಿ ನಮ್ಮ ಕುಡ್ಲ ಟಾಕೀಸ್‌ನಿಂದ ನಿರ್ಮಾಪಕರಿಗೆ ಗೌರವಧನವನ್ನು ನೀಡಲಾಗುತ್ತದೆ. ಒಂದು ತಿಂಗಳ ಪ್ರತಿ ರವಿವಾರ ಈ ಚಿತ್ರವನ್ನು ಮೂರು ಬಾರಿ ಪ್ರದರ್ಶನ ಎಂದರೆ ತಿಂಗಳಿಗೆ 12 ಪ್ರದರ್ಶನವನ್ನು ನೀಡಲಾಗುತ್ತದೆ ಎಂದರು.

ನಮ್ಮ ಕುಡ್ಲ ಟಾಕೀಸ್‌ನ ಸಿಒಒ ಕದ್ರಿ ನವನೀತ್ ಶೆಟ್ಟಿ ಮಾತನಾಡಿ, ನಮ್ಮ ಕುಡ್ಲ ಟಾಕೀಸ್ ಎಂದರೆ ಮನೆಯಲ್ಲೇ ಸಿನಿಮಾ ಥಿಯೇಟರ್ ಕಲ್ಪನೆಯಲ್ಲಿ ಸಿನಿಮಾ ನೋಡುವುದು. ಪ್ರೇಕ್ಷಕರು ಇದಕ್ಕೆ ಪ್ರತಿಯಾಗಿ ಕೇಬಲ್‌ಗೆ 120 ರೂ. ನೀಡಬೇಕು ಎಚ್‌ಡಿ ಚಾನೆಲ್ ಆದರೆ 160 ರೂ. ನೀಡಬೇಕು. ಮನೆಯಲ್ಲಿ ಟಿವಿಯಲ್ಲೇ ಕುಟುಂಬ ಸಮೇತರಾಗಿ ಸಣ್ಣ ಮೊತ್ತಕ್ಕೆ ತುಳು ಸಿನಿಮಾ ವೀಕ್ಷಣೆ ಮಾಡಬಹುದು ಎಂದರು.

2021ರ ಫೆ.19ರಂದು ತುಳು ಚಿತ್ರರಂಗ 50 ವರ್ಷ ಪೂರೈಸಲಿದೆ. ಈ ಸಂದರ್ಭದಲ್ಲಿ ನಮ್ಮ ಕುಡ್ಲ ಟಾಕೀಸ್ ಅಸ್ತಿತ್ವಕ್ಕೆ ಬರುತ್ತಿರುವುದು, ಸಿನಿಮಾ ನಿರ್ಮಾಪಕರಿಗೆ ಇದರಿಂದ ಪ್ರಯೋಜನವಾಗಲಿದೆ. ಈಗಾಗಲೇ ಅಬತರ ತುಳು ಸಿನಿಮಾದ ಜತೆಗೆ ದೇವದಾಸ್ ಕಾಪಿಕಾಡ್‌ರ ಮೂರು ಚಿತ್ರಗಳು ಈ ಟಾಕೀಸ್‌ನಲ್ಲಿ ಪ್ರದರ್ಶನ ಕಾಣಲಿದೆ ಎಂದು ನಮ್ಮ ಕುಡ್ಲ ಟಾಕೀಸ್‌ನ ಗೌರವ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹೇಳಿದರು.

ನಮ್ಮ ಕುಡ್ಲದ ನಿರ್ದೇಶಕ ಲೀಲಾಕ್ಷ ಬಿ .ಕರ್ಕೇರ ಮಾತನಾಡಿ, ದ.ಕ ಹಾಗೂ ಉಡುಪಿಯ ವಿ4 ಹಾಗೂ ಮಲ್ನಾಡ್‌ ಇನ್ಫೋಟೆಕ್ ವ್ಯಾಪ್ತಿಯಲ್ಲಿರುವ ಕೇಬಲ್ ಬಳಕೆದಾರರಿಗೆ ನಮ್ಮ ಕುಡ್ಲ ಟಾಕೀಸ್ ಚಾನೆಲ್ ಪಡೆದುಕೊಳ್ಳುವ ಅವಕಾಶ ಇದೆ. ಈಗಾಗಲೇ ಟಾಕೀಸ್‌ನಲ್ಲಿ ಪ್ರಸಾರವಾಗುವ ಚಿತ್ರಗಳ ಪೈರೆಸಿ ಮಾಡುವವರ ಕುರಿತು ಕೂಡ ಚಾನೆಲ್‌ನಲ್ಲಿ ಕ್ರಮದ ಕುರಿತು ಚಿಂತನೆ ನಡೆಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಈ ಸಂದರ್ಭ ವಿ4 ಮಿಡಿಯಾ ಎಂಎಸ್‌ಒನ ರಣದೀಪ್ ಕಾಂಚನ್, ಪಿಆರ್‌ಒ ಜಗನ್ನಾಥ್ ಶೆಟ್ಟಿ ಬಾಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X