Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿದ್ದರಾಮಯ್ಯರ ದೇಶನಿಷ್ಠೆ ಬಗ್ಗೆ ನಮಗೆ...

ಸಿದ್ದರಾಮಯ್ಯರ ದೇಶನಿಷ್ಠೆ ಬಗ್ಗೆ ನಮಗೆ ಸಂದೇಹವಿದೆ: ಪೇಜಾವರಶ್ರೀ

ಎಚ್.ಡಿ.ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ16 Feb 2021 8:57 PM IST
share
ಸಿದ್ದರಾಮಯ್ಯರ ದೇಶನಿಷ್ಠೆ ಬಗ್ಗೆ ನಮಗೆ ಸಂದೇಹವಿದೆ: ಪೇಜಾವರಶ್ರೀ

ಉಡುಪಿ, ಫೆ.16: ಮಂದಿರ ನಿರ್ಮಾಣಗೊಳ್ಳುತ್ತಿರುವ ಜಮೀನು ವಿವಾದಿತ ಸ್ಥಳ. ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡುವುದಿಲ್ಲ ಎಂದು ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾತಿಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಿದ್ಧರಾಮಯ್ಯ ಅವರ ದೇಶನಿಷ್ಠೆಯ ಬಗ್ಗೆ ತಮಗೆ ಸಂದೇಹವಿದೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಈ ಚರ್ಚಾಸ್ಪದ ಹೇಳಿಕೆ ನೀಡಿದರು. ಈ ಮೂಲಕ ಸಿದ್ಧರಾಮಯ್ಯರ ಹೇಳಿಕೆ ಹಾಗೂ ಅದಕ್ಕೆ ಪೇಜಾವರಶ್ರೀ ಗಳು ನೀಡಿರುವ ಪ್ರತಿಕ್ರಿಯೆ ಈಗ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.

‘ನಾವು ಯಾರಿಗೂ ಯಾವತ್ತೂ ದೇಣಿಗೆಗೆ ಒತ್ತಾಯ ಮಾಡಿಲ್ಲ. ವಿಶ್ವದಾದ್ಯಂತ ದೇಣಿಗೆ ಕೊಡುವವರು ಸಂತೋಷದಿಂದ ಕೊಡುತ್ತಿದ್ದಾರೆ. ವಿವಾದಿತ ಎಂದು ಹೇಳುತ್ತೀರಿ, ನೀವು ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಮಾನ್ಯ ಮಾಡುವುದಿಲ್ಲವೇ? ಮಂದಿರ ನಿರ್ಮಾಣ ಭೂಮಿ ಬಗ್ಗೆ ವಿವಾದಿತ ಭೂಮಿ ಎನ್ನುತ್ತೀರಿ, ಸುಪ್ರೀಂ ಕೋರ್ಟ್ ತೀರ್ಪು ತಿಳಿದಿಲ್ಲವೇ?’ ಎಂದು ಪ್ರಶ್ನಿಸಿದ ಸ್ವಾಮೀಜಿ, ಹೀಗಾಗಿ ಸಿದ್ದರಾಮಯ್ಯನವರ ದೇಶನಿಷ್ಠೆ ಕುರಿತಾಗಿಯೇ ನಾವು ಸಂದೇಹ ತಾಳುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿಗೆ ತರಾಟೆ: ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧವೂ ಸ್ವಾಮೀಜಿ ಆಕ್ರೋಶಭರಿತ ಮಾತುಗಳನ್ನಾಡಿದರು. ಕುಮಾರಸ್ವಾಮಿ ಅವರ ವ್ಯಕ್ತಿತ್ವ ಬಗ್ಗೆ ನಮಗೆ ಸಂದೇಹ ಬರುತ್ತಿದೆ ಎಂದರು.

ರಾಮಮಂದಿರ ನಿರ್ಮಾಣಕ್ಕೆ ನಡೆದಿರುವ ದೇಣಿಗೆ ಸಂಗ್ರಹ ಕುರಿತಂತೆ ಕುಮಾರಸ್ವಾಮಿ ಪ್ರಶ್ನೆಗಳನ್ನೆತಿದ್ದರು. ಇದಕ್ಕೆ ಅಯೋಧ್ಯಾ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲೊಬ್ಬರಾಗಿರುವ ಪೇಜಾವರ ಮಠಾಧೀಶರು ಪ್ರತಿಕ್ರಿಯೆ ನೀಡಿದ್ದಾರೆ.

'ದಾಖಲೆ ಕೊಡಿ': ಕುಮಾರಸ್ವಾಮಿ ಅವರು ತಮ್ಮ ಆರೋಪಕ್ಕೆ ಒಂದು ಸಣ್ಣ ದಾಖಲೆಯನ್ನು ಕೊಟ್ರು ಆರೋಪಕ್ಕೆ ಬೆಲೆ ಬರುತ್ತದೆ. ನೀವು ಯಾರೋ ದಾರಿಯಲ್ಲಿ ಅಡ್ಡಾಡುವ ಸಾಮಾನ್ಯ ವ್ಯಕ್ತಿಯಲ್ಲ. ನೀವು ಈ ರಾಜ್ಯದ ಪ್ರತಿಷ್ಠಿತ ವ್ಯಕ್ತಿ. ಒಂದು ರಾಜಕೀಯ ಪಕ್ಷದ ಮುಖಂಡ. ನೀವು ಮಾತನಾಡುವ ಮೊದಲು ಅದಕ್ಕೆ ಸೂಕ್ತ ಸಾಕ್ಷಾಧಾರಗಳನ್ನು ಕೊಡಬೇಕು. ಒಂದು ಕಾಲದಲ್ಲಿ ಇಡೀ ರಾಜ್ಯವನ್ನು, ಸರಕಾರವನ್ನು ಮುನ್ನಡೆಸಿದವರು. ನೀವು ಹೀಗೆ ಆರೋಪ ಮಾಡುವ ಸಂದರ್ಭದಲ್ಲಿ ಯೋಚನೆಯನ್ನು ಮಾಡಬೇಕಾಗುತ್ತದೆ ಎಂದರು.

ತೀರ್ಥಕ್ಷೇತ್ರ ಟ್ರಸ್ಟ್ ಈ ತರದ ಗುರುತು ಮಾಡುವ ಯಾವುದೇ ಸೂಚನೆಗಳನ್ನು ನಮ್ಮ ಕಾರ್ಯಕರ್ತರಿಗೆ ನೀಡಿಲ್ಲ. ನಿರೀಕ್ಷೆ ಮೀರಿ ಭಕ್ತರು ರಾಮಮಂದಿರಕ್ಕೆ ದೇಣಿಗೆಯನ್ನು ನೀಡುತ್ತಿದ್ದಾರೆ. ಇಷ್ಟೆಲ್ಲ ಜನ ಮುಂದೆ ಬಂದು ದೇಣಿಗೆ ನೀಡುತ್ತಿರುವಾಗ, ಒತ್ತಾಯಪೂರ್ವಕವಾಗಿ ದೇಣಿಗೆ ಸಂಗ್ರಹಿಸುವ ಪ್ರಶ್ನೆಯ ಬರುವುದಿಲ್ಲ ಎಂದು ತೀಕ್ಷ್ಣವಾಗಿ ನುಡಿದರು.

ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ದೇಶದ ಜನತೆಗೆ ಕುಮಾರಸ್ವಾಮಿ ಅವರ ವ್ಯಕ್ತಿತ್ವದ ಮೇಲೆ ಸಂಶಯ ಮೂಡುತ್ತದೆಯೇ ಹೊರತು ನಮ್ಮ ಸಂಸ್ಥೆಯ ಮೇಲೆ ಸಂಶಯ ಬರಲಿಕ್ಕಿಲ್ಲ. ಕುಮಾರಸ್ವಾಮಿಯವರ ಒಳಗೆ ಏನಿದೆ ಅದು ಹೊರಗೆ ಬಂದಿದೆ. ಒಳ್ಳೆಯ ಕೆಲಸ ಆಗುವಾಗ ಸಾವಿರಾರು ವಿಘ್ನಗಳು ಎದುರಾಗುತ್ತದೆ. ರಾಮ ಮಂದಿರಕ್ಕೆ ಶಿಲಾನ್ಯಾಸ ಮಾಡಿದ ನಂತರ ಈವರೆಗೆ ಯಾವುದೇ ವಿಘ್ನಗಳು ಬಂದಿಲ್ಲ, ಇದು ಮೊದಲ ಅಡ್ಡಿ. ಆರೋಪಗಳು ಬರುವುದು ಸಹಜ, ಅದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳನ್ನು ಕೊಡಬೇಕು. ನಾವು ಇದನ್ನೆಲ್ಲ ಧೈರ್ಯವಾಗಿ ಎದುರಿಸಿಕೊಂಡು ಮುಂದೆ ಹೋಗುತ್ತೇವೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X