Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಕ್ಕೆ ಮಾದರಿಯಾದ ಮರಳು ನೀತಿ...

ದೇಶಕ್ಕೆ ಮಾದರಿಯಾದ ಮರಳು ನೀತಿ ಶೀಘ್ರದಲ್ಲೆ ಜಾರಿ: ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ16 Feb 2021 11:01 PM IST
share
ದೇಶಕ್ಕೆ ಮಾದರಿಯಾದ ಮರಳು ನೀತಿ ಶೀಘ್ರದಲ್ಲೆ ಜಾರಿ: ಸಚಿವ ಮುರುಗೇಶ್ ನಿರಾಣಿ

ಬಾಗಲಕೋಟೆ, ಫೆ.16: ಪ್ರತಿಯೊಬ್ಬರಿಗೂ ಕಡಿಮೆ ದರದಲ್ಲಿ ಕೈಗೆಟುಕುವ ರೀತಿ ಮರಳು ಸಿಗುವಂತಹ ಹಾಗೂ ದೇಶಕ್ಕೆ ಮಾದರಿಯಾದ ಮರಳು ನೀತಿಯನ್ನು ಶೀಘ್ರದಲ್ಲೆ ಜಾರಿ ಮಾಡಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಮಂಗಳವಾರ ನಗರದಲ್ಲಿ ಮರಳು ಹಾಗೂ ಜಲ್ಲಿ ಕ್ರಷರ್ ಮಾಲಕರಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡಿದ ಅವರು, 2021-26ಕ್ಕೆ ಅನ್ವಯವಾಗುವಂತೆ ನೂತನ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದರು.

ಬೇರೆ ಬೇರೆ ರಾಜ್ಯಗಳು ಮರಳು ನೀತಿಯಲ್ಲಿ ‘ಕರ್ನಾಟಕದ ಮಾದರಿ'ಯನ್ನು ಅನುಸರಿಸಬೇಕು. ಈಗಾಗಲೇ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಈ ನೂತಿಯನ್ನು ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ಒಂದೊಂದು ಭಾಗಕ್ಕೆ ಪ್ರತ್ಯೇಕವಾದ ಮರಳು ನೀತಿ ಇದೆ. ಈಗಾಗಲೇ ಒಂದು ಕರಡನ್ನು ತಂದಿದ್ದೇವೆ. ಇದನ್ನೆಲ್ಲವನ್ನೂ ಬಗೆಹರಿಸುವ ಬಗ್ಗೆ ಈ ನೀತಿ ತರುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಮರಳು ಸಿಗುತ್ತಿರಲಿಲ್ಲ. ಇಲ್ಲಿಯವರೆಗೆ ಎಲ್ಲದಕ್ಕೂ ಕಡಿವಾಣವಿತ್ತು. ಇದನ್ನು ತಪ್ಪಿಸುವುದಕ್ಕಾಗಿ ಉದ್ದೇಶದಿಂದ ಎತ್ತಿನಗಾಡಿ, ಟ್ರ್ಯಾಕ್ಟರ್ ಗಳಲ್ಲಿ ಮರಳು ತರಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದರು.

ಮರಳು ಗಣಿಗಾರಿಕೆಗೆ ಬ್ಲಾಕ್‍ಗಳನ್ನು ಗುರುತಿಸಿ ಹರಾಜಿನ ಮೂಲಕ ಗುತ್ತಿಗೆ ನೀಡಿರುವ ಪ್ರದೇಶ ಹೊರತುಪಡಿಸಿ ಹಳ್ಳ, ತೊರೆಗಳಲ್ಲಿ ಸ್ವಂತ ಬಳಕೆಗೆ ದ್ವಿಚಕ್ರ ವಾಹನ, ಕತ್ತೆ, ಬಂಡಿ ಟ್ರ್ಯಾಕ್ಟರ್ ಗಳಲ್ಲಿ ಕೊಂಡೊಯ್ಯುವ ಬಡವರು, ರೈತರಿಗೆ ಪರವಾನಗಿ, ರಾಯಲ್ಟಿ(ರಾಜಧನ)ಯಿಂದ ವಿನಾಯಿತಿ ನೀಡಲಾಗುವುದು. ಆದರೆ, ಇದನ್ನೆ ಸಂಗ್ರಹಿಸಿ ಲಾರಿ, ಟಿಪ್ಪರ್ ಗಳಲ್ಲಿ ಬೇರೆಡೆ ಸಾಗಣೆ, ಮಾರಾಟ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.

ಎಲ್ಲರಿಗೂ ಮರಳು ಸಿಗಬೇಕು. ನೈಸರ್ಗಿಕವಾಗಿಯೂ ಅಪಾಯ ಆಗಬಾರದು. ಸರಕಾರದ ಬೊಕ್ಕಸಕ್ಕೆ ಆದಾಯ ಬರಬೇಕು. ಸಾರ್ವಜನಿಕರಿಗೂ ತೊಂದರೆಯಾಗಬಾರದು. ಇದು ನಮ್ಮ ಇಲಾಖೆಯ ಮೂಲ ಉದ್ದೇಶ ಎಂದ ಅವರು, ಸ್ಥಗಿತಗೊಂಡಿರುವ ಗಣಿಗಳನ್ನು ಪುನರ್ ಆರಂಭ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಈಗಾಗಲೇ ಜಿಲ್ಲಾವಾರು ಮಾಹಿತಿ ನೀಡುವಂತೆ ಭೂ ವಿಜ್ಞಾನ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಇದೇ ಮೊದಲ ಬಾರಿಗೆ ಇಲಾಖೆಯಲ್ಲಿ ಏಕಗವಾಕ್ಷಿ ಪದ್ದತಿಯನ್ನು ಜಾರಿ ಮಾಡುತ್ತಿದ್ದೇವೆ. ಅರಣ್ಯ, ಕಂದಾಯ ಮತ್ತಿತರ ಇಲಾಖೆಗಳನ್ನು ಒಟ್ಟಿಗೆ ಸೇರಿಸಿ ಗಣಿ ಸಮಸ್ಯೆಗೆ ಸಂಬಂಧಿಸಿದಂತೆ ಪರಿಹರಿಸುತ್ತೇವೆ ಎಂದು ಮುರುಗೇಶ್ ನಿರಾಣಿ ತಿಳಿಸಿದರು.

ಗಣಿ ಇಲಾಖೆಯಲ್ಲಿ ಸಾವಿರಾರು ಪ್ರಕರಣಗಳಿವೆ. ಎಲ್ಲವನ್ನೂ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ಗಣಿ ಅದಾಲತ್ ಜಾರಿಗೆ ತರುತ್ತೇವೆ. ಈ ಅದಾಲತ್ ಮೂಲಕ ನೆನೆಗುದಿಗೆ ಬಿದ್ದಿರುವ ಅರ್ಜಿಗಳನ್ನು ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X