ಗಾಂಜಾ ಸೇವನೆ: ಮೂವರು ಆರೋಪಿಗಳ ಬಂಧನ

ಮಂಗಳೂರು, ಫೆ.16: ನಗರದ ಹೊರವಲಯದ ಮಂಜನಾಡಿಯ ನಾಟೆಕಲ್ ಬಸ್ ನಿಲ್ದಾಣದ ಬಳಿ ಮಂಗಳವಾರ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಜುಲ್ಫಿ ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಪಿಎಸ್‌ಐ ಮಲ್ಲಿಕಾರ್ಜುನ ಬಿರಾದಾರ್ ಗಸ್ತು ತಿರುಗುತ್ತಿದ್ದಾಗ ಆರೋಪಿ ಧೂಮಪಾನ ಮಾಡುತ್ತಿದ್ದು, ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪೊಲೀಸ್ ಠಾಣೆ ಮಹಿಳಾ ಪಿಎಸ್‌ಐ ಪ್ರತಿಭಾ ಕೆ.ಎಚ್. ಸಿಬ್ಬಂದಿ ಜತೆ ಗಸ್ತು ತಿರುಗುತ್ತಿದ್ದಾಗ ಕೂಳೂರಿನಲ್ಲಿ ಆಕರ್ಷ್ ಕೆ. (23), ಪ್ರವಿತ್ ಡಿ. (23) ಸಿಗರೇಟ್ ಸೇವನೆ ಮಾಡುತ್ತಿರುವುದು ಕಂಡು ಬಂದಿದೆ. ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Next Story





